ಬೆಂಗಳೂರು: ಗೋವಿಂದರಾಜನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬೆಂಗಳೂರು ಕಮಿಷನರ್ ದಯಾನಂದ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಬಂಧಿತ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಗೋವಾದಿಂದ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ಈತನೊಂದಿಗೆ ಇನ್ನಿಬರು ಸಹಚರರನ್ನು ಬಂಧಿಸಿಲಾಗಿದೆ. ಬಂಧಿತನಿಂದ 1 ಕೆಜಿ, 215 ಗ್ರಾಂ ಚಿನ್ನಾಭರಣ, 3 ಕೆಜಿ 500 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಟ್ಟು 70ವನ್ನು ಲಕ್ಷ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
2005 ರಿಂದಲೂ ಬೆಂಗಳೂರಿನಲ್ಲಿ ಮಾತ್ರವಲ್ಲದೇ ಹೊರರಾಜ್ಯಗಳಾದ ಚನ್ನೈ, ತಿರುಪತಿ ಯಲ್ಲಿ ತನ್ನ ಕೈಚಳಕ ತೋರಿಸಿ ಪೊಲೀಸರ ಅತಿಥಿಯಾಗಿದ್ದ. ಡೋರ್ ಲಾಕ್ ಒಡೆದು ರಾತ್ರಿ ವೇಳೆ ಕೈಚಳಕ ತೋರುತ್ತಿದ್ದ ಈತ
ಈ ಹಿಂದೆ ಮೂರು ಬಾರಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ, ಇದುವರೆಗೂ ಒಟ್ಟು 80 ಪ್ರಕರಣಗಳಲ್ಲಿ ಬಂಧಿತ ಆರೋಪಿ ಭಾಗಿಯಾಗಿದ್ದ. ಕಾರ್ತಿಕ್ ವಿರುದ್ದ ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಜಾಮೀನು ರಹಿತ ಪ್ರಕರಣಗಳು ದಾಖಲಾಗಿದೆ ಎಂದರು.