ನವದೆಹಲಿ: ಯುವ ಶೂಟರ್ ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಒಂದೇ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಮನು ಭಾಕರ್ ಅವರಿಗೆ ಸರ್ಕಾರ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಇವರಲ್ಲದೆ ಚೆಸ್ ಚಾಂಪಿಯನ್ ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಕೂಡ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹೌದು ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಮನು ಭಾಕರ್, ಗುಕೇಶ್ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ!
ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸರಿಯಾದ ಪರಿಶೀಲನೆಯ ನಂತರ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆರಂಭದಲ್ಲಿ ಖೇಲ್ ರತ್ನ ಪ್ರಶಸ್ತಿ ಪಟ್ಟಿಯಲ್ಲಿ ಮನು ಭಾಕರ್ ಹೆಸರು ಇಲ್ಲ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ ಮನು ಭಾಕರ್ ಅವರ ತಂದೆ ಕ್ರೀಡಾ ಸಚಿವಾಲಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಕ್ರೀಡಾ ಸಚಿವಾಲಯ ಈಗ ಅಧಿಕೃತವಾಗಿ ಪಟ್ಟಿ ಪ್ರಕಟಿಸುವ ಮೂಲಕ ಎದ್ದಿದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ.