ಕನ್ನಡದ ಬಿಗ್ ರಿಯಾಲಿಟಿ ಶೋ ‘ಬಿಗ್ ಬಾಸ್ ಸೀಸನ್ 11’ರ ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಇದು ಸುದೀಪ್ ಅವರ ಕೊನೆಯ ಸೀಸನ್ ಆಗಿದ್ದು ಅಭಿಮಾನಿಗಳು ಸುದೀಪ್ ರನ್ನು ನೋಡಲು ಕಾಯ್ತಿದ್ದಾರೆ. ಗ್ರ್ಯಾಂಡ್ ಫಿನಾಲೆಗೆ ಭರ್ಜರಿಯಾಗಿ ರೆಡಿಯಾಗಿರುವ ವೇದಿಕೆ ಮೇಲೆ ಸುದೀಪ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಕಿಚ್ಚನ ಎಂಟ್ರಿಯ ಪ್ರೋಮೋವನ್ನು ವಾಹಿನಿ ಹಂಚಿಕೊಂಡಿದ್ದು ಕಿಚ್ಚನ ಲುಕ್ ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ.
ಸುದೀಪ್ ಅವರ ‘ಬಿಗ್ ಬಾಸ್ ಸೀಸನ್ 11’ರ ನಿರೂಪಣೆಯು ಕೊನೆಯ ಸೀಸನ್ ಆಗಿದೆ. ಈ ಹೊತ್ತಿನಲ್ಲಿ ಮನೆಯಲ್ಲಿರುವ 6 ಸ್ಪರ್ಧಿಗಳ ಪೈಕಿ ಒಬ್ಬರಿಗೆ ಅತಿ ಹೆಚ್ಚು ಮತಗಳು ಬಂದಿವೆ. ಆದರೆ ನಿಖರವಾಗಿ ಯಾರಿಗೆ ಎಂದು ತಿಳಿದಿಲ್ಲ. ಸೀಸನ್ 11ರ ವಿನ್ನರ್ ಯಾರೆಂಬ ಕುತೂಹಲ ಪ್ರತಿಯೊಬ್ಬರಲ್ಲು ಶುರುವಾಗಿದೆ.
ಕಲರ್ಫುಲ್ ವೇದಿಕೆಯಲ್ಲಿ ಸುದೀಪ್ ಸಖತ್ ಆಗಿಯೇ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚೆಗೆ ರಿಲೀಸ್ ಆಗಿ ಯಶಸ್ಸು ಕಂಡ ‘ಮ್ಯಾಕ್ಸ್’ ಸಿನಿಮಾದ ಸಾಂಗ್ಗೆ ನಟ ಜಬರ್ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಅಷ್ಟು ಸುಲಭವಾಗಿ ಎಲ್ಲಿಯೂ ಸುದೀಪ್ ಅವರು ವೇದಿಕೆ ಮೇಲೆ ಡ್ಯಾನ್ಸ್ ಮಾಡಲ್ಲ. ಆದರೆ ಈ ಬಾರಿ ಸುದೀಪ್ ಒಂದೆರಡು ಹೆಜ್ಜೆಗಳನ್ನು ಹಾಕಿ ಅಭಿಮಾನಿಗಳನ್ನು ರಂಜಿಸಿದ್ದಾರೆ.