ಕರುನಾಡಿನ ಕಾಶ್ಮೀರ ಕೊಡಗಿನಲ್ಲಿ ಕೊಡವ ಸಮಾಜದ ಉಳಿವಿಗಾಗಿ ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಕೊಡವ ಸಂಸ್ಕೃತಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಕೊಡವರ ಸಂಖ್ಯೆ ಕ್ಷೀಣಿಸುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
Virat Kohli: ದಾಖಲೆಗಳ ಸರದಾರನ ಮುಂದಿದೆ 10 ಮಹತ್ವದ ದಾಖಲೆ! ಬ್ರೇಕ್ ಮಾಡ್ತಾರ ಕಿಂಗ್ ಕೊಹ್ಲಿ!
ಹೆಚ್ಚು ಹೆಚ್ಚು ಮಕ್ಕಳನ್ನು ಹೆರುವ ಪೋಷಕರಿಗೆ 25,000 ರೂ.ನಿಂದ 1 ಲಕ್ಷ ರೂ. ವರೆಗೆ ಬಹುಮಾನ ನೀಡುವ ಆಫರ್ವೊಂದನ್ನು ಪ್ರಕಟಿಸಿದೆ.
ಇತ್ತೀಚಿನ ವರ್ಷಗಳಿಂದ ಕೊಡವರು ಸಾಂಸ್ಕೃತಿಕವಾಗಿ ಅಧಃಪತನದತ್ತ ಸಾಗುತ್ತಿದ್ದಾರೆ ಅನ್ನೋ ಆತಂಕ ಜನರನ್ನ ಕಾಡುತ್ತಿದೆ. ಕೆಲವರು ತಮ್ಮ ಉದ್ಯೋಗಕ್ಕಾಗಿ ದೂರದ ಊರಿಗೆ ತೆರಳಿ ಅಲ್ಲೇ ಜೀವನ ಕಟ್ಟಿಕೊಳ್ಳುತ್ತಿದ್ದಾರೆ. ಜೊತೆಗೆ ಒಂದೇ ಮಗು ಸಾಕು ಅಂತ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ. ಜಿಲ್ಲೆಯ ಹಬ್ಬ ಹರಿದಿನಗಳಿಗೆ ಬರುವ ಕೊಡವರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಮುಂದೊಂದು ದಿನ ಕೊಡವರು ಬೆರಳೆಣಿಕೆ ಸಂಖ್ಯೆಗೆ ಇಳಿದರೂ ಅಚ್ಚರಿ ಇಲ್ಲ. ಹಾಗಾಗಿ ಜಿಲ್ಲೆಯ ವಿವಿಧ ಊರುಗಳಲ್ಲಿರುವ ತಮ್ಮ ಸಮಾಜದವರು ಹೆಚ್ಚು ಹೆಚ್ಚು ಮಕ್ಕಳನ್ನು ಹೆರುವಂತೆ ಆಫರ್ವೊಂದನ್ನ ಕೊಡವ ಸಮಾಜ ನೀಡಿದೆ.
ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಮೂರು ಮಕ್ಕಳಿಗೆ ಜನ್ಮ ನೀಡುವ ಕೊಡವ ಪೋಷಕರಿಗೆ 50 ಸಾವಿರ ರೂ., 4 ಮಕ್ಕಳಿಗೆ ಜನ್ಮ ನೀಡುವ ಪೋಷಕರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ಈ ಹಣವನ್ನ ಆ ಮಗುವಿನ ಹೆಸರಲ್ಲಿ ಬ್ಯಾಂಕ್ನಲ್ಲಿ
ಠೇವಣಿ ಇಟ್ಟು 18 ವರ್ಷ ತುಂಬಿದ ಬಳಿಕ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಇದಕ್ಕೆ ಸಮಾಜದ ಕೆಲ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಹೊಸ ಆಫರ್ ಘೋಷಣೆ ಮಾಡಿರುವ ಕೊಡವ ಸಮಾಜ, ಈಗಾಗಲೇ 3 ಮತ್ತು 4 ಮಕ್ಕಳನ್ನು ಮಾಡಿಕೊಂಡಿರುವ ತಲಾ ಒಂದೊಂದು ಕುಟುಂಬವನ್ನು ಗುರುತಿಸಿ ಹಣ ನೀಡಿ ಹಾಗೂ ಸನ್ಮಾನ ಕೂಡ ಮಾಡಿದೆ. ಹಲವು ಕೊಡವ ಕುಟುಂಬಗಳಿಗೆ ವೈಯಕ್ತಿಕವಾಗಿಯೂ ಹಣಕಾಸು ನೆರವು ನೀಡಿದೆ.
ತಮ್ಮ ಜನಾಂಗ ಮತ್ತು ಸಂಸ್ಕೃತಿ ಉಳಿಸಲು ಇಂತಹ ಕ್ರಮಕ್ಕೆ ಶೆಟ್ಟಿಗೇರಿ ಕೊಡವ ಸಮಾಜ ಮುಂದಾಗಿದೆ.