ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ(49) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಅವರನ್ನು ಕೋಲ್ಕತಾದ ವುಡ್‌ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವರ್ಷದ ಜನವರಿಯಲ್ಲಿ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದ್ದು,
ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ನಂತರ ತಿಂಗಳಿಗೆ ಎರಡು ಬಾರಿ ಆಂಜಿಯೋಪ್ಲಾಸ್ಟಿ ಮಾಡಬೇಕಾಗಿತ್ತು. ಆದರೂ ಚೇತರಿಸಿಕೊಂಡರು ನಿರಂತರವಾಗಿ ಬಿಸಿಸಿಐನಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಸೌರವ್ ಗಂಗೂಲಿ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ಹಾರೈಸಿದ್ದಾರೆ.

