ಬೆಂಗಳೂರು:- ಪಂಚರಾಜ್ಯ ಚುನಾವಣೆಯಲ್ಲಿ ಕನಿಷ್ಠ ಮೂರು ಕಡೆ ಅಧಿಕಾರ ಹಿಡಿಯುತ್ತೇವೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪಂಚರಾಜ್ಯ ಚುನಾವಣೆಯಲ್ಲಿ ಐದು ರಾಜ್ಯಗಳ ಪೈಕಿ ಕನಿಷ್ಠ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತೇವೆ. ನಾಲ್ಕನೇ ಕಡೆಯೂ ಅಧಿಕಾರ ಹಿಡಿಯೋ ಸಾಧ್ಯತೆ ಇದೆ. ಎಕ್ಸಿಟ್ ಪೋಲ್ ನೋಡಿ ಗೊತ್ತಾಗುತ್ತದೆ ಎಂದರು.
ಇನ್ನೂ ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ವೈದ್ಯರು ಕೂಡಾ ಶಾಮೀಲಾಗಿ ಮಾಡುತ್ತಿರುವುದು ಅಪರಾಧ. ಯಾವುದೇ ಸರ್ಕಾರವಿದ್ದರೂ ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇಂಥ ಕೆಲಸ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ತಡೆಗಟ್ಟಲು ಸರ್ಕಾರ ಬದ್ಧ. ಯಾರೇ ಹೆಣ್ಣು ಭ್ರೂಣ ಹತ್ಯೆ ಮಾಡಿದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಹೇಳಿದರು