ಬೆಳಗಾವಿ: ರಾಜ್ಯಾಧ್ಯಂತ ಆತಂಕ ಸೃಷ್ಟಿಸಿದ್ದ ಭ್ರೂಣ ಹತ್ಯೆ ಪ್ರಕರಣದ ತನಿಖೆಗೆ ಎಸ್ ಐಟಿ ತನಿಖೆಗೆ ನೀಡಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಆದರೆ ಸಿಐಡಿಗಿಂತ ಎಸ್ ಐ ಟಿ ಗೆ ನೀಡಿ. ಅಲ್ಲದೆ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಸದನದಲ್ಲಿ ಭ್ರೂಣ ಹತ್ಯೆ ವಿಚಾರ ಪ್ರಸ್ತಾಪಿಸಿದ ಅವರು, ಇಷ್ಟೆಲ್ಲಾ ಚರ್ಚೆಯಾದರೂ ಹೊಸಕೋಟೆಯಲ್ಲಿ 16 ವಾರಗಳ ಭ್ರೂಣ ಹತ್ಯೆ ಮಾಡಲಾಗಿದೆ.
ಕಾನೂನಿಗೆ ಎಷ್ಟು ಗೌರವ ಕೊಡ್ತಾರೆ? ಎಷ್ಟು ಬಲಾಢ್ಯರಿದ್ದಾರೆ? ಎಂದು ಅರ್ಥ ಆಗುತ್ತದೆ ಎಂದರು. 27 ವರ್ಷಗಳಲ್ಲಿ ಆರೋಗ್ಯ ಇಲಾಖೆ ಕೇವಲ 87 ಪ್ರಕರಣ ದಾಖಲಾಗಿದೆ. ಒಬ್ಬೊಬ್ಬ ವೈದ್ಯರು 300 ಭ್ರೂಣ ಹತ್ಯೆ ಮಾಡಿದ್ದಾರೆ. ಇದೊಂದು ರೀತಿಯಲ್ಲಿ ಕೊಲೆ, ಗಂಡು ಮಗ ಬೇಕು ಎಂಬುದು ಇದಕ್ಕೆ ಕಾರಣ. ವರದಕ್ಷಿಣೆ ಕೂಡಾ ಇದಕ್ಕೆ ಕಾರಣವಾಗ್ತಿದೆ ಎಂದು ಹೇಳಿದರು.
https://ainlivenews.com/faster-mohammad-shami-farm-house-tight-security/
ಗರ್ಭಿಣಿ ತಾಯಿಗೆ ತೀರ್ಮಾನದ ಅಧಿಕಾರ ಇರಲ್ಲ, ಬದಲಾಗಿ ಕುಟುಂಬ ಮಾಡ್ತಿದೆ. ಮಹಿಳೆ ಎಲ್ಲಾ ರಂಗದಲ್ಲಿ ಕೆಲಸ ಮಾಡುವ ಇಂತಹ ಯುಗದಲ್ಲಿ ಭ್ರೂಣ ಹತ್ಯೆ ತಲೆತಗ್ಗಿಸುವಂತದ್ದು. ಮನೆ ಹಾಳು ಕೆಲಸ ಮಾಡುವ ಆಸ್ಪತ್ರೆಗೆ ನಮ್ಮ ಮನೆ ಕ್ಲೀನಿಕ್ ಎಂದು ಹೆಸರು ಇಡಲಾಗಿದೆ ಎಂದು ಗಮನಸೆಳೆದರು. ಇದರ ಹಿಂದೆ ದೊಡ್ಡ ಗ್ಯಾಂಗ್ ಇದೆ. ಮೊದಲು ಕುಟುಂಬದಲ್ಲೇ ಮಹಿಳೆಗೆ ಟಾರ್ಚರ್ ನೀಡಲಾಗುತ್ತದೆ. ಬಳಿಕ ಏಜೆಂಟ್ ಹುಡುಕಿ ಆಲೆಮನೆಗೆ ಕರೆದುಕೊಂಡು ಹೋಗಿ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಈ ಕೃತ್ಯದಲ್ಲಿ ವೈದ್ಯರೂ ಸೇರಿರುವುದು ಖೇದಕರ, ಅವರಿಗೆ ನಾಚಿಕೆ ಆಗಬೇಕು ಎಂದರು.