ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್-2023 ಫೈನಲ್ ಪಂದ್ಯದಲ್ಲಿ ರನ್ ಮೆಷಿನ್ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದರು.
81 ರನ್ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಆಪದ್ಬಾಂಧವರಾಗಿದ್ದಾರೆ. 52 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನೊಂದಿಗೆ ವಿರಾಟ್ ಅರ್ಧಶತಕ ಸಿಡಿಸಿದ್ದಾರೆ. ಕೊಹ್ಲಿ ವಿಶ್ವಕಪ್ನಲ್ಲಿ 9ನೇ 50+ ಸ್ಕೋರ್ ಸಿಡಿಡಿದ್ದಾರೆ. ಇದು ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಅವರ 72ನೇ ಅರ್ಧಶತಕವಾಗಿದೆ.
ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಅವರೊಂದಿಗೆ 66 ರನ್ಗಳ ಜೊತೆಯಾಟ ಪ್ರದರ್ಶಿಸಿದ್ದಾರೆ. ಇನ್ನೂ ವಿರಾಟ್ ಕೊಹ್ಲಿಗೆ ಉತ್ತಮ ಸಾಥ್ ನೀಡುತ್ತಿರುವ ಕೆ.ಎಲ್ ರಾಹುಲ್ 67 ಎಸೆತಗಳಲ್ಲಿ 37 ರನ್ ಸಿಡಿಸಿದ್ದಾರೆ.