ರನ್ ಮಷಿನ್ ಕಿಂಗ್ ಕೊಹ್ಲಿ ಅವರು ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಫಾಫ್ ಡುಪ್ಲೆಸಿಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 21 ರನ್ ಬಾರಿಸಿದ ಕೂಡಲೇ ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದರು.
ಬಿಜೆಪಿ ಮುಖಂಡನ ಮನೆ ಮೇಲೆ ಐಟಿ ದಾಳಿ – 5 ಕೋಟಿ ನಗದು, 7 ಕೆಜಿ ಚಿನ್ನಾಭರಣ ಜಪ್ತಿ!
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 21 ರನ್ ಬಾರಿಸಿದ ತಕ್ಷಣ ಈ ಸೀಸನ್ನಲ್ಲಿ 400 ರನ್ ಪೂರೈಸಿದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 10 ಸೀಸನ್ಗಳಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ
ಇದಕ್ಕೂ ಮುನ್ನ ಈ ದಾಖಲೆ ಮಾಜಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಹೆಸರಿನಲ್ಲಿತ್ತು. ಮಿಸ್ಟರ್ ಐಪಿಎಲ್ ಖ್ಯಾತಿಯ ರೈನಾ 9 ಸೀಸನ್ಗಳಲ್ಲಿ ಈ ಸಾಧನೆ ಮಾಡಿದ್ದರು.
ಇದಲ್ಲದೇ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಆರಂಭಿಕ ಬ್ಯಾಟ್ಸ್ಮನ್ ಆಗಿ 4000 ರನ್ ಪೂರೈಸಿದ್ದಾರೆ. ಇದರೊಂದಿಗೆ ಐಪಿಎಲ್ನಲ್ಲಿ 4000 ರನ್ ಗಳಿಸಿದ ನಾಲ್ಕನೇ ಆರಂಭಿಕ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.,