ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರು ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್ ಕ್ಯಾಪ್ ರೇಸ್ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಮಾವಿನ ಹಣ್ಣನ್ನು ನೀರಲ್ಲಿ ನೆನೆಸಿಟ್ಟು ತಿನ್ನಬೇಕಂತೆ..! ವೈದ್ಯರು ಹೇಳೋದು ಇದನ್ನೆ..!
ಇಂಡಿಯನ್ ಪ್ರೀಮಿಯರ್ ಲೀಗ್ನ 49ನೇ ಪಂದ್ಯದಲ್ಲಿ ಸಿಎಸ್ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರುತುರಾಜ್ 48 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 62 ರನ್ ಬಾರಿಸಿದ್ದರು.
ಈ ಅರ್ಧಶತಕದೊಂದಿಗೆ ಇದೀಗ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ರೇಸ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರು. ಇದೀಗ ಕೊಹ್ಲಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿರುವ ರುತುರಾಜ್ ಐಪಿಎಲ್ 2024 ರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.
1- ರುತುರಾಜ್ ಗಾಯಕ್ವಾಡ್ (CSK): ಈ ಬಾರಿಯ ಐಪಿಎಲ್ನಲ್ಲಿ 10 ಇನಿಂಗ್ಸ್ ಆಡಿರುವ ರುತುರಾಜ್ ಗಾಯಕ್ವಾಡ್ 1 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 509 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
2- ವಿರಾಟ್ ಕೊಹ್ಲಿ (RCB): 10 ಇನಿಂಗ್ಸ್ಗಳಲ್ಲಿ 4 ಅರ್ಧಶತಕ ಮತ್ತು 1 ಭರ್ಜರಿ ಸೆಂಚುರಿ ಸಿಡಿಸಿರುವ ವಿರಾಟ್ ಕೊಹ್ಲಿ ಈವರೆಗೆ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
3- ಸಾಯಿ ಸುದರ್ಶನ್ (GT): ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ಐಪಿಎಲ್ 2024 ರಲ್ಲಿ ಈವರೆಗೆ 10 ಇನಿಂಗ್ಸ್ ಆಡಿದ್ದು, ಈ ವೇಳೆ 2 ಅರ್ಧಶತಕ ಸಿಡಿಸುವ ಮೂಲಕ ಒಟ್ಟು 418 ರನ್ ಕಲೆಹಾಕಿದ್ದಾರೆ.
4- ಕೆಎಲ್ ರಾಹುಲ್ (LSG): ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಉತ್ತಮ ಫಾರ್ಮ್ನಲ್ಲಿದ್ದು, 10 ಇನಿಂಗ್ಸ್ಗಳಲ್ಲಿ 3 ಅರ್ಧಶತಕಗಳೊಂದಿಗೆ ಒಟ್ಟು 406 ರನ್ ಗಳಿಸಿದ್ದಾರೆ.