ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 600 ಇನಿಂಗ್ಸ್ ಆಡಿದ ಕೆಲವೇ ಕೆಲವು ಬ್ಯಾಟರ್ಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ.
ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈವರೆಗೆ 599 ಇನಿಂಗ್ಸ್ ಆಡಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದರೆ 600 ಇನಿಂಗ್ಸ್ ಆಡಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 664 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಸಚಿನ್ ಒಟ್ಟು 782 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಒಟ್ಟು 34357 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇನ್ನು ಭಾರತದ ಪರ ಅತ್ಯಧಿಕ ಇನಿಂಗ್ಸ್ ಆಡಿದ 2ನೇ ಬ್ಯಾಟರ್ ರಾಹುಲ್ ದ್ರಾವಿಡ್. 509 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ದ್ರಾವಿಡ್ ಒಟ್ಟು 605 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಒಟ್ಟು 24208 ರನ್ ಕಲೆಹಾಕಿದ್ದಾರೆ
ಇದೀಗ 537 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 599 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಹೊಸ ಇತಿಹಾಸ ನಿರ್ಮಿಸಲಿದ್ದಾರೆ.