ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ವಿಶ್ವದಾಖಲೆ ಬರೆಯಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ. ಆಗಸ್ಟ್ 2 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವಿಶ್ವದಾಖಲೆ ಬರೆಯಲು ಸಜ್ಜಾಗಿದ್ದಾರೆ.
ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 152 ರನ್ ಕಲೆಹಾಕಿದರೆ, ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 14 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಬಹುದು.
ಪ್ರವಾಸಿಗರೇ ಗಮನಿಸಿ.! ಇಂದಿನಿಂದ 2 ದಿನಗಳು ಕೊಡಗಿನ ಪ್ರವಾಸಿ ತಾಣಗಳು ಬಂದ್
ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 14 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಸದ್ಯ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಕ್ರಿಕೆಟ್ ದೇವರು ಒಟ್ಟು 350 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರು. ಆದರೀಗ ಈ ದಾಖಲೆ ಮುರಿಯಲು ಕೊಹ್ಲಿಗೆ ಇನ್ನೂ 57 ಪಂದ್ಯಗಳ ಅವಕಾಶವಿದೆ.
ಅಂದರೆ ಏಕದಿನ ಕ್ರಿಕೆಟ್ನಲ್ಲಿ 292 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಈಗಾಗಲೇ 13848 ರನ್ ಪೇರಿಸಿದ್ದಾರೆ. ಹೀಗಾಗಿ ಮುಂದಿನ 57 ಪಂದ್ಯಗಳಲ್ಲಿ ಒಟ್ಟು 152 ರನ್ ಬಾರಿಸಿದರೂ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗುವುದು ಖಚಿತ.
ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 27 ಸಾವಿರ ರನ್ ಪೂರೈಸಿದ ಬ್ಯಾಟರ್ಗಳ ಪಟ್ಟಿಗೆ ಸೇರ್ಪಡೆಗೊಳ್ಳಲು ಕೊಹ್ಲಿಗೆ ಬೇಕಿರುವುದು ಕೇವಲ 116 ರನ್ಗಳು ಮಾತ್ರ. ಶ್ರೀಲಂಕಾ ವಿರುದ್ಧ 116 ರನ್ ಕಲೆಹಾಕಿದರೆ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ 27 ಸಾವಿರ ರನ್ ಪೂರೈಸಿದ 4ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.