ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಐಪಿಎಲ್ನಲ್ಲಿ ಇತಿಹಾಸ ಬರೆದಿದ್ದಾರೆ.
IPL 2024: ಗೆಲುವಿನ ಓಟ ನಿಲ್ಲಿಸಿದ RCB.. ಲೀಗ್ ನಿಂದ ಔಟ್…!
RR ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅದಾಗ್ಯೂ ಈ ಪಂದ್ಯದಲ್ಲಿ ಕೊಹ್ಲಿ ಹೆಚ್ಚು ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ತಮ್ಮ ಇನ್ನಿಂಗ್ಸ್ನಲ್ಲಿ 24 ಎಸೆತಗಳನ್ನು ಎದುರಿಸಿದ ವಿರಾಟ್ 33 ರನ್ ಬಾರಿಸಿ ಔಟಾದರು.
ಪಟ್ಟಿಯಲ್ಲಿ ಶಿಖರ್ ಧವನ್ (6769 ರನ್) ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (6628 ರನ್) ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6565 ರನ್) ನಾಲ್ಕನೇ ಸ್ಥಾನದಲ್ಲಿ ಮತ್ತು ಸುರೇಶ್ ರೈನಾ (5528 ರನ್) 5 ನೇ ಸ್ಥಾನದಲ್ಲಿದ್ದಾರೆ., ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ (5243) 6ನೇ, ಎಬಿ ಡಿವಿಲಿಯರ್ಸ್ (5162) 7ನೇ, ಕ್ರಿಸ್ ಗೇಲ್ (4965) 8ನೇ, ರಾಬಿನ್ ಉತ್ತಪ್ಪ (4952) 9ನೇ ಹಾಗೂ ದಿನೇಶ್ ಕಾರ್ತಿಕ್ (4831) 10ನೇ ಸ್ಥಾನದಲ್ಲಿದ್ದಾರೆ.
ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 252 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಟಿ20 ಲೀಗ್ನಲ್ಲಿ ಒಂದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ 6000 ರನ್ಗಳ ದಾಖಲೆಯನ್ನು ಪೂರ್ಣಗೊಳಿಸಿದ ನಂತರ, ಇಲ್ಲಿಯವರೆಗೆ ಯಾವುದೇ ಆಟಗಾರ ಐಪಿಎಲ್ನಲ್ಲಿ ಅತಿ ಹೆಚ್ಚು ರನ್ಗಳ ವಿಷಯದಲ್ಲಿ ಕೊಹ್ಲಿಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ ಎನ್ನಲಾಗಿದೆ.