ಪಾಕ್ ನಾಯಕನ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಪುಡಿಪುಡಿ ಆಗಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಯುಎಸ್ಎ ವಿರುದ್ದದ ಪಂದ್ಯದಲ್ಲಿ ಬಾಬರ್ ಆಝಂ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 44 ರನ್ ಬಾರಿಸಿದ್ದರು. ಈ 44 ರನ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಟಿ20 ವಿಶ್ವಕಪ್ನಲ್ಲಿ ಮೊದಲ ಗೆಲುವು ಸಾಧಿಸಿದ ಕೆನಡಾ.. ಐರ್ಲೆಂಡ್ ಗೆ ಸೋಲು!
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 110 ಟಿ20 ಇನಿಂಗ್ಸ್ಗಳಿಂದ 4038 ರನ್ ಕಲೆಹಾಕಿ ವಿಶ್ವ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಬಾಬರ್ ಯಶಸ್ವಿಯಾಗಿದ್ದಾರೆ.
ಈವರೆಗೆ 113 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 4067 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಅಂದಹಾಗೆ ಬಾಬರ್ ಆಝಂ ಮತ್ತು ವಿರಾಟ್ ಕೊಹ್ಲಿ ನಡುವೆ ಕೇವಲ 29 ರನ್ಗಳ ವ್ಯತ್ಯಾಸವಷ್ಟೇ ಇದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಈ ವಿಶ್ವ ದಾಖಲೆಯನ್ನು ಮತ್ತೊಮ್ಮೆ ತಮ್ಮದಾಗಿಸಿಕೊಂಡರೂ ಅಚ್ಚರಿಪಡಬೇಕಿಲ್ಲ ಎನ್ನಲಾಗಿದೆ.