ಕಿವಿ ಹಣ್ಣು ವರ್ಷವಿಡೀ ದೊರೆಯುವ ಒಂದು ಹಣ್ಣಾಗಿದೆ. ಸೂಪರ್ಫುಡ್ ವಿಭಾಗದಲ್ಲಿ ಕಿವಿಹಣ್ಣು ಮೊದಲ ಸ್ಥಾನವನ್ನು ಪಡೆದುಕೊಂಡಿದೆ . ಕಿವಿಯಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅನೇಕ ಪ್ರಮುಖ ಪೋಷಕಾಂಶಗಳಿವೆ.ಈ ಹಣ್ಣು ಹಲವಾರು ಕಾಯಿಲೆಗಳಿಗೆ ಸೂಪರ್ ಔಷಧಿಯಾಗಿ ಕೆಲಸ ಮಾಡುತ್ತದೆ. ಮಧುಮೇಹ, ಹೃದ್ರೋಗ ಮತ್ತು ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ ಕಿವಿ ಹಣ್ಣು ಉತ್ತಮ ಪರಿಹಾರವಾಗಿದೆ. ಕಿವಿ ಸಾಮಾನ್ಯವಾಗಿ ಹೃದ್ರೋಗ ಇರುವವರಿಗೆ ಒಳ್ಳೆಯದು. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ
ಕಿವಿ ಹಣ್ಣಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಪೋಷಕಾಂಶಗಳು ಅಧಿಕವಾಗಿದೆ. ವಿಶೇಷವಾಗಿ ವಿಟಮಿನ್ ಕೊರತೆಯನ್ನು ಗುಣಪಡಿಸುವಲ್ಲಿ ಕಿವೀಸ್ ಸಾಕಷ್ಟು ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಮಾತ್ರವಲ್ಲದೇ, ವಿಟಮಿನ್ ಎ, ಬಿ6, ಬಿ12, ಇ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮೆಗ್ನೀಷಿಯಂನಂತಹ ಪೋಷಕಾಂಶಗಳಿವೆ. ಈ ಹಣ್ಣನ್ನು ತಿನ್ನುವುದರಿಂದ ರಕ್ತನಾಳಗಳು, ಮೂಳೆಗಳು, ಹಲ್ಲುಗಳ ಆರೋಗ್ಯ ಮತ್ತು ದೃಷ್ಟಿ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.
ಕಿವಿ ಹಣ್ಣಿನ ಒಂದು ಸಣ್ಣ ಭಾಗ (75 ಗ್ರಾಂ) 42 ಕ್ಯಾಲೋರಿಗಳು, 0.1 ಗ್ರಾಂ ಪ್ರೋಟೀನ್, 10.1 ಗ್ರಾಂ ಕಾರ್ಬೋಹೈಡ್ರೇಟ್ಗಳು, 0.4 ಗ್ರಾಂ ಕೊಬ್ಬು, ವಿಟಮಿನ್ ಸಿ, ಫೈಬರ್ ಮತ್ತು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಹಾಗಾದರೆ ಕಿವಿ ಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ.
ವಿಟಮಿನ್ ಸಿ: ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ನಮ್ಮ ದೇಹ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅಲ್ಲದೇ ನಮ್ಮ ಚರ್ಮವನ್ನು ಆರೋಗ್ಯಕರವಾಗಿರಿಸಲು ಸಹ ಈ ಹಣ್ಣು ಸಹಾಯ ಮಾಡುತ್ತದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಯಾರೆಲ್ಲಾ ಕಿವಿ ಹಣ್ಣನ್ನು ತಿನ್ನುತ್ತಾರೋ ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ನಾರಿನಂಶ: ಕಿವಿ ಹಣ್ಣಿನಲ್ಲಿ ನಾರಿನಂಶ ಹೇರಳವಾಗಿದ್ದು ಜೀರ್ಣಕ್ರಿಯೆಗೆ ನೆರವಾಗುತ್ತದೆ. ಆದ್ದರಿಂದ ಮಲಬದ್ಧತೆ ಸಮಸ್ಯೆ ಇರುವವರು ಕಿವಿ ಹಣ್ಣನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಈ ಹಣ್ಣನ್ನು ಜ್ಯೂಸ್ ಆಗಿ ಕುಡಿಯುವುದಕ್ಕಿಂತ ಹಣ್ಣಾಗಿಯೇ ತಿನ್ನುವುದು ಉತ್ತಮ.
ಉತ್ಕರ್ಷಣ ನಿರೋಧಕಗಳು: ಕಿವಿ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ದೇಹದ ಜೀವಕೋಶಗಳನ್ನು ರಕ್ಷಿಸುತ್ತದೆ ಮತ್ತು ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೇ, ಇದು ದೇಹದಲ್ಲಿ ಫ್ರೀ ರಾಡಿಕಲ್ಗಳೊಂದಿಗೆ ಹೋರಾಡುತ್ತಾರೆ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ.
ಹೃದಯದ ಆರೋಗ್ಯ: ಕಿವಿ ಹಣ್ಣು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಹಣ್ಣು ರಕ್ತ ಹೆಪ್ಪುಗಟ್ಟುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳವನ್ನು ತಡೆಯುತ್ತದೆ. ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ.
ಉಸಿರಾಟದ ಆರೋಗ್ಯ: ಕಿವಿ ಹಣ್ಣು ಉಸಿರಾಟದ ಆರೋಗ್ಯಕ್ಕೆ ಒಳ್ಳೆಯದು. ಇದು ಆಸ್ತಮಾದಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಮತ್ತು ಶ್ವಾಸಕೋಶದ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಗಾಢ ನಿದ್ರೆ: ಕಿವಿ ಹಣ್ಣಿನಲ್ಲಿರುವ ಸಿರೊಟೋನಿನ್ ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಹಾಗಾಗಿ ರಾತ್ರಿ ಗಾಢ ನಿದ್ರೆಯಿಂದ ಬಳಲುತ್ತಿರುವವರು ಮಲಗುವ ಮುನ್ನ ಕಿವಿ ಹಣ್ಣನ್ನು ತಿನ್ನಬಹುದು
ಚರ್ಮ: ಕಿವಿ ಹಣ್ಣಿನಲ್ಲಿರುವ ವಿಟಮಿನ್ಗಳು ಮತ್ತು ಆ್ಯಂಟಿಆಕ್ಸಿಡೆಂಟ್ಗಳು ಚರ್ಮವನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದು ಮುಖದ ಮೇಲೆ ವಯಸ್ಸಾಗುವಿಕೆ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ಸುಂದರವಾಗಿ ಕಾಣಬೇಕೆಂದರೆ ಪ್ರತಿದಿನ ಒಂದು ಕಿವಿ ಹಣ್ಣನ್ನು ತಿನ್ನುವುದನ್ನು ರೂಢಿಸಿಕೊಳ್ಳಿ