ಬೆಂಗಳೂರು: ಇಂದು ಸರ್ವಜ್ಞನಗರದ ಎಚ್ ಆರ್.ಬಿ.ಆರ್ ಲೇಔಟ್ ನಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡದ ಕೆ.ಜೆ ಜಾರ್ಜ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಮಾತನಾಡಿದ ಕೆ.ಜೆ ಜಾರ್ಜ್ ಸಾರ್ವಜನಿಕರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳಲ್ಲಿ ಅವಶ್ಯಕ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸ್ಥಳೀಯರಿಗೆ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು.
ಈ ಕಟ್ಟಡವು 3 ಅಂತಸ್ತಿನಿಂದ ಕೂಡಿದ್ದು, ಅದರಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ಹಿರಿಯ ನಾಗರೀಕರಿಗೆ ಅನುಕೂಲವಾಗುವಂತೆ ವಿವಿಧ ವಿಭಾಗಗಳನ್ನು ಸೃಜಿಸಲಾಗುವುದು. ಗ್ರಂಥಾಲಯದಲ್ಲಿ ವಿಶೇಷ ವಿಭಾಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಪ್ರತ್ಯೇಕ ವಿಭಾಗವಿರಲಿದೆ. ಹಾಗೆಯೇ ಡಿಜಿಟಲ್ ಲೈಬ್ರರಿ ಸೌಲಭ್ಯವೂ ಈ ಗ್ರಂಥಾಲಯದಲ್ಲಿ ದೊರೆಯಲಿದೆ ಎಂದು ಹೇಳಿದರು.

ಗ್ರಂಥಾಲಯ ಇಲಾಖೆಯ ಡಿಜಿಟಲೀಕರಣ ವ್ಯವಸ್ಥೆಯಿಂದಾಗಿ ಮನೆಯಲ್ಲೇ ಕುಳಿತು ಗ್ರಂಥಗಳ ಅಧ್ಯಯನ ಮಾಡುವಂತಹ ವ್ಯವಸ್ಥೆ ರೂಪಿಸಿರುವುದು ಅತ್ಯಂತ ಉಪಯುಕ್ತವಾಗಿದೆ ಎಂದರು.ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಮುಖಂಡರು, ನಿವಾಸಿಗಳು ಹಾಗೂ ಇತರರು ನಮ್ಮೊಂದಿಗೆ ಇದ್ದರು.