ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿರುವ KMF ನೌಕರರು, ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಒಂದು ವಾರ ಕಾಲಾವಕಾಶ ನೀಡಿದೆ. ಇದು ಜನವರಿ 31ಕ್ಕೆ ಕೊನೆಗೊಳ್ಳಲಿದೆ. ಅಷ್ಟರೊಳಗೆ ಬೆಡಿಕೆಗಳು ಈಡೇರದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ನೌಕರರ ಸಂಘ ಎಚ್ಚರಿಕೆ ನೀಡಿದೆ.
ಹೊಸ ಕಾರು ಮತ್ತು ಬೈಕ್ ಖರೀದಿಸುತ್ತಿದ್ದೀರಾ!? ರಾಜ್ಯ ಸರ್ಕಾರದಿಂದ ಬಿಗ್ ಶಾಕ್!
ಬಾಕಿ ಉಳಿದಿರುವ ವೇತನ ಶೀಘ್ರವೇ ಮಂಜೂರು ಮಾಡಬೇಕೆಂದು ಕೆಎಂಎಫ್ ನೌಕರರ ಸಂಘದ ಅಧ್ಯಕ್ಷ ಗೋವಿಂದಗೌಡ ಆಗ್ರಹಿಸಿದ್ದಾರೆ. 7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರನ ಶೇ 25 ರ ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಈ ಪೈಕಿ ಶೇ 17 ರಷ್ಟು ಮಾತ್ರ ಹೆಚ್ಚಳ ಮಾಡಿದೆ. ಶೇ 8 ರಷ್ಟು ವೇತನ ಹೆಚ್ಚಳ, ಬಿಡುಗಡೆ ಬಾಕಿ ಇದೆ. ಅವುಗಳನ್ನು ಈಡೇರಿಸಬೇಕು ಎಂದು ಗೋವಿಂದಗೌಡ ಹೇಳಿದ್ದಾರೆ. ಜತೆಹೆ, ಬೇಡಿಕೆಗಳು ಈಡೇರುವ ಭರವಸೆ ಇದೆ ಎಂದೂ ಹೇಳಿದ್ದಾರೆ.
ಸಂಘವು ರಾಜ್ಯಾದ್ಯಂತ ಸುಮಾರು 7,000 ಉದ್ಯೋಗಿಗಳನ್ನು ಒಳಗೊಂಡಿದೆ, ಅವರಲ್ಲಿ 1,400 ಉನ್ನತ ದರ್ಜೆಯ ಸಿಬ್ಬಂದಿ ಇದ್ದಾರೆ. ಇದರ ಆಧಾರದಲ್ಲಿ ಲೆಕ್ಕಹಾಕಿದರೆ, ವೇತನ ಹೆಚ್ಚಳ ಜಾರಿಗೆ ಬಂದರೆ ಅದಕ್ಕಾಗಿ ಸರ್ಕಾರ ತಿಂಗಳಿಗೆ 3 ಕೋಟಿ ರೂ. ವ್ಯಯಿಸಬೇಕಾಗುತ್ತದೆ.
ಸದ್ಯದ ಮಟ್ಟಿಗೆ, ವೇತನ ಬಾಕಿಯ ಮೊತ್ತದ ಬಿಡುಗಡೆ ಮಾಡಲು ಸರ್ಕಾರವು ಇನ್ನೂ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಭಾವಿಸಿದೆ ಎಂದು ಕೆಎಂಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.