ಬೀದರ್:- ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಕೊಟ್ಟ ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಹಾಡಹಗಲೇ ಗೆಳೆಯನಿಗೆ ಚಾಕು ಇರಿದ ಭಯಾನಕ ಘಟನೆ ಜರುಗಿ
‘ಟಾಕ್ಸಿಕ್’ ಗ್ಲಿಂಪ್ಸ್ ಶೇರ್ ಮಾಡಿ ಯಶ್ಗೆ ಬರ್ತ್ಡೇ ವಿಶ್ ಮಾಡಿದ ರಿಷಬ್ ಶೆಟ್ಟಿ
ದಯಾನಂದ ಶಿಂಧೆ ಆರೋಪಿ. ಅಶೋಕ್ ಪಾಟೀಲ್ ಗಾಯಾಳು. ನಗರದ ಬಾರ್ವೊಂದರಲ್ಲಿ ಸ್ನೇಹಿತರ ಜೊತೆ ಅಶೋಕ್ ಕುಳಿತಿದ್ದ. ಈ ವೇಳೆ ಕೈಯಲ್ಲಿ ಚಾಕು ಹಿಡಿದುಕೊಂಡೆ ಬಾರ್ಗೆ ನುಗ್ಗಿದ್ದ ಆರೋಪಿ ದಯಾನಂದ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಅಶೋಕ್ ಆರೋಪಿ ದಯಾನಂದನಿಗೆ 10 ಸಾವಿರ ರೂ. ಸಾಲ ನೀಡಿದ್ದ. ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ.
ಚಾಕು ಇರಿದ ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಗಾಯಾಳು ಅಶೋಕ್ನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.