ಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಮಹನಿಂಗ ನಂದಗಾವಿ ಹೇಳಿದರು. ಇಲ್ಲಿನ ಹಳೇಹುಬ್ಬಳ್ಳಿ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ನಗರದಲ್ಲಿ ಮಾರುತಿ ನಾರಾಯಣಪುರ ಎಂಬಾತನ ಮೇಲೆ ಯುವಕರ ಗುಂಪೊಂದು ಅಟ್ಟಾಡಿಸಿ ಚಾಕುವಿನಿಂದ ಬೆನ್ನಿಗೆ, ಪಕ್ಕಡೆ ಭಾಗಕ್ಕೆ ಇರಿಯಲಾಗಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡ ಮಾರುತಿಯನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Chanakya Niti: ನಿಮಗಿರುವ ಕಷ್ಟಗಳನ್ನು ಎದುರಿಸಲು ಚಾಣಕ್ಯ ಹೇಳಿದ ಈ 10 ವಿಷಯಗಳನ್ನು ನೆನಪಿಡಿ ಸಾಕು.!
ಪ್ರಕರಣವನ್ನು ದಾಖಲಿಸಿಕೊಂಡ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶಿವಶಂಕರ ಕಾಲೋನಿಯ ನಿವಾಸಿಗಳಾದ ರೋಹಿತ್ ಹಂಚಿನಮನಿ, ವಿಶಾಲ ಬಿಲಾನಾ, ಕುಶಾಲ ವಜ್ಜನ್ನವರ, ಶ್ರೀಕಾಥ್ ದುಂಡಿ, ವಿಶಾಲ ಡೋಣಿ, ಅಜಯ್ ಹಂಚಿನಮನಿ, ಪೃಥ್ವಿರಾಜ್ ಕೌದಿ ಎಂಬಾತರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಎರಡು ಚಾಕು, ಒಂದು ಪಂಚ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು. ತನಿಖೆ ವೇಳೆ ಶಾಲೆಯ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹಳೆಯ ವೈಷಮ್ಯಕ್ಕೆ ಚಾಕು ಇರಿಯಲಾಗಿದೆ ಎಂದರು.