ತುಮಕೂರು:- ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಕುಣಿಗಲ್- ಮದ್ದೂರು ಬೈ ಪಾಸ್ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಬರ್ಬರ ಕೊಲೆ ಮಾಡಿರುವ ಘಟನೆ ಜರುಗಿದೆ.
ಸುರೇಶ್ @ ಕ್ಯಾಪ್ಟನ್ ಸೂರಿ (40) ಕೊಲೆಯಾದ ರೌಡಿಶೀಟರ್. ಹುಲಿಯೂರುದುರ್ಗ ಬಳಿಯ ಕಂಪ್ಲಾಪುರದಲ್ಲಿ ವಾಸವಿದ್ದ ಸುರೇಶ್, ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಈತ ಕೇವಲ ಮೂರು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ.
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಹುಲಿಯೂರುದುರ್ಗ ಬೈಪಾಸ್ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಕಾರಿನ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸೂರಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಹಾಗೂ ಎಸ್.ಪಿ ಅಶೋಕ್, ಎಎಸ್ಪಿ ಮರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾದ ಆರೋಪಿಗಳಿಗೆ ಹುಡುಕಾಟ ಆರಂಭಿಸಿದ್ದಾರೆ. ಮೃತದೇಹವನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.