ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ.
ಈ ಪಂದ್ಯದಲ್ಲಿ ಕೊಹ್ಲಿ ಮತ್ತೆ ವಿಫಲರಾದರು. ಇನ್ನಿಂಗ್ಸ್ನ 2ನೇ ಓವರ್ನಲ್ಲಿ ಕೊಹ್ಲಿ ಕ್ಯಾಚಿತ್ತು ಔಟಾದರು. ಕೊಹ್ಲಿ ಈ ಪಂದ್ಯದಲ್ಲಿ ಕೇವಲ 4 ರನ್ ಬಾರಿಸಲಷ್ಟೇ ಶಕ್ತರಾದರು.
ನಾಯಕ ರೋಹಿತ್ ಶರ್ಮಾ ಕೂಡ ಪೆವಿಲಿಯನ್ ಸೇರಿಕೊಂಡಿದ್ದಾರೆ. ಮೂರನೇ ಓವರ್ನಲ್ಲಿ ಅಫ್ರಿದಿ ಬೌಲಿಂಗ್ನಲ್ಲಿ ರೋಹಿತ್ ಕ್ಯಾಚಿತ್ತು ಔಟಾದರು.
ಇಂದು, 2024 ರ ಟಿ20 ವಿಶ್ವಕಪ್ನ 19 ನೇ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಈ ಪಂದ್ಯ ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಈ ಪಂದ್ಯಕ್ಕೆ ಕಾಲಿಟ್ಟಿದ್ದರೆ, ಪಾಕಿಸ್ತಾನ ತನ್ನ ಕಳೆದ ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.