ಕೋಲಾರ : ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಕೋಲಾರ ತಾಲ್ಲೂಕಿನ ಹರಟಿ ಅರಣ್ಯ ಸಮೀಪದಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಸುಮಾರು ೨೮ ವರ್ಷದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಿಯರು ಶವವನ್ನು ಕಂಡು ಗಾಬರಿಗೊಂಡು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಜಿಲ್ಲಾ ವರಿಷ್ಟಾಧಿಕಾರಿ ನಿಖೀಲ್ ಬಿ, ಎಎಸ್ಪಿ, ಡಿಐಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪೋಲೀಸರ ತನಿಖೆಯಿಂದಷ್ಟೆ ಮೃತ ವ್ಯಕ್ತಿಯ ಗುರುತು ಪತ್ತೆಯಾಗಬೇಕಿದೆ.
ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.