ಕೋಲಾರ : ನಗರದಲ್ಲಿ ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ನಿರ್ಮಿಸಲು ಬದ್ಧನಾಗಿದ್ದು, ಅದು ನನ್ನ ಜವಾಬ್ದಾರಿಯಾಗಿದೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿದ್ದು ಉಳಿದ ಸಿಬ್ಬಂದಿ ಮೇಲೆ ಒತ್ತಡ ಉಂಟಾಗುತ್ತಿರುವುದು ನಿಜ. ಮುಂದಿನ ದಿನಗಳಲ್ಲಿ ಭರ್ತಿಗೆ ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಭರವಸೆ ನೀಡಿದರು.
ಕೋಲಾರ ಕನ್ನಡ ಭಾಷೆ ಹೆಚ್ಚು ಮಾತನಾಡುವ ಮುಖೇನ ಭಾಷೆಯನ್ನು ಶ್ರೀಮಂತಗೊಳಿಸಿ – ಡಾ.ಎಂ.ಚಂದ್ರಶೇಖರ್
ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಹೊಸದಾಗಿ ಆಯ್ಕೆಯಾಗಿರುವ ನೂತನ ನಿರ್ದೇಶಕರಿಗೆ ನಗರ ಹೊರವಲಯದಲ್ಲಿರುವ ತಮ್ಮ ಅತಿಥಿಗೃಹದಲ್ಲಿ ಏರ್ಪಡಿಸಿದ್ದ ಅಭಿನಂದನೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜಿಲ್ಲೆಯ ಹಾಗೂ ತಾಲ್ಲೂಕಿನಲ್ಲಿ ಭಾರಿ ಬದಲಾವಣೆ ಆಗಬೇಕಿದೆ. ಕೋಲಾರಕ್ಕೆ ವೈದ್ಯಕೀಯ ಕಾಲೇಜು ಸಿಕ್ಕಿದ್ದು, ಅದನ್ನು ಉತ್ತಮವಾಗಿ ಹಾಗೂ ಸೂಕ್ತ ಸ್ಥಳದಲ್ಲಿ ನಿರ್ಮಿಸಬೇಕೆಂಬುದು ನನ್ನ ಗುರಿ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳು ಕೂಡ ಸ್ಥಳ ನೋಡಿಕೊಂಡು ಹೋಗುತ್ತಿದ್ದಾರೆ.
ಎಸ್ಎನ್ಆರ್ ಜಿಲ್ಲಾಸ್ಪತ್ರೆ ಸ್ಥಳ ಕೂಡ ಪರಿಶೀಲನೆಯಲ್ಲಿದೆ ಎಂದರು. ಸಂಘಕ್ಕೆ ಹೊಸದಾಗಿ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು, ತಾಲ್ಲೂಕು ಅಧ್ಯಕ್ಷರಿಗೆ ಅಭಿನಂದನೆಗಳು. ಪರಸ್ಪರ ಸಹಕಾರದಿಂದ ತಾಲ್ಲೂಕು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು. ನಾನು ರೋಲ್ ಕಾಲ್ ಗಿರಾಕಿ ಅಲ್ಲ, ಅಧಿಕಾರಿಗಳು ಸೇರಿದಂತೆ ಯಾರಿಗೂ ಪೋನ್ ಮಾಡಿ ಕಾಟ ಕೊಡಲ್ಲ ಸೇಡು ತೀರಿಸಿಕೊಳ್ಳುವ ವ್ಯಕ್ತಿಯೂ ಅಲ್ಲ. ನೌಕರರ ಸಹಾಯಕ್ಕೆ ನಾನು ಸದಾ ಬದ್ಧ ಆದರೆ, ಕೆಲಸ ಸರಿಯಾಗಿ ನಡೆಯಬೇಕು. ಸಾರ್ವಜನಿಕರಿಗೆ ರೈತರಿಗೆ ತೊಂದರೆ ಆಗದಂತೆ ಕೆಲಸ ಮಾಡಬೇಕು ಸರ್ಕಾರದ ಯೋಜನೆ ಜಾರಿ ಮಾಡಬೇಕು ಜನರಿಗೆ ತಲುಪಿಸಬೇಕು ಎಂದು ಹೇಳಿದರು.