ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ ಹಾಗೂ ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂಬ ಆರೋಪಗಳ ಕಾರಣ ಉಪಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.
Cardamom Benefits: ಪ್ರತಿದಿನ ಏಲಕ್ಕಿ ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ..?
ಇದೇ ವೇಳೆ, ಹಳೆಯ ತೂಕ ಮಾಡುವ ಮಾಪನ ಕಂಡು ಉಪಲೋಕಾಯುಕ್ತರು ಗರಂ ಆಗಿದ್ದಾರೆ. ಎಪಿಎಂಸಿಯಲ್ಲಿ ರೈತರಿಗೆ ನೀರಿನ ವ್ಯವಸ್ಥೆ ಇಲ್ಲ, ತ್ಯಾಜ್ಯ ತುಂಬಿ ತುಳುಕಾಡುತ್ತಿದೆ. ಇರಿಂದ ಕೆಟ್ಟ ವಾಸನೆ ಹರಡಿಬಿಟ್ಟಿದೆ. ಈ ನಡುವೆಯೂ ಕಮಿಷನ್ ಹೆಚ್ಚಿಗೆ ವಸೂಲಿ ಮಾಡುತ್ತಿದ್ದಾರೆ. ಒಳಗೆ ಏನು ನಡೆಯುತ್ತಿದೆ ಎಂಬುದು ಅಲ್ಲಿನ ಅಧಿಕಾರಿಗಳಿಗೇ ಗೊತ್ತಿಲ್ಲ. ಅವರು ಏನು ಕೆಲಸ ಮಾಡುತ್ತದ್ದರೆ ಪರಿಶೀಲಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇನೆ ಎಂದರು.