ಕೋಲಾರ : ಕಿತ್ತೂರು ವಿಜಯೋತ್ಸವಕ್ಕೆ ಎರಡು ನೂರು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಅಕ್ಟೋಬರ್ ನಲ್ಲಿ ನಡೆಯುವ ಕಿತ್ತೂರು ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರಕಾರ ತೀರ್ಮಾನಿಸಿದ್ದು ಅದರಂತೆ ಚನ್ನಮ್ಮ ವಿಜಯೋತ್ಸವ ಜ್ಯೋತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು.
ಅದರಂತೆ ಕೋಲಾರ ನಗರಕ್ಕೆ ಬಂದ ಕಿತ್ತೂರು ಉತ್ಸವ-೨೦೨೪ ರ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ ಕಚೇರಿ ಸಿಬ್ಬಂದಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಅಕ್ರಂ ಪಾಷ, ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಧಿಕಾರಿ ಡಾ.ಮೈತ್ರಿ, ತಹಸೀಲ್ದಾರ್ ನಯನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ,ಕಸಾ
ಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್, ತಹಶಿಲ್ದಾರ ಕಚೇರಿ ಸಿಬ್ಬಂದಿ ಮತ್ತು ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ರಾಯಣ್ಣ ಮತ್ತು ರಾಣಿ ಚನ್ನಮ್ಮಾಜಿ ಅಭಿಮಾನಿಗಳು ಮತ್ತು ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದರು.