ಕೋಲಾರ : ಡಾ . ಬಿ. ಆರ್ ಅಂಬೇಡ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಉಚ್ಚಾಟಿಸಬೇಕು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಪರಿಷತ್ ಸ್ಥಾನದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
PM Kisan: ಪಿಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ ಬರೋದು ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ
ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ಸಂಘಪರಿವಾರದವರಿಗೆ ಹಾಗೂ ಬಿಜೆಪಿ ಪಕ್ಷಕ್ಕೆ ಅಂಬೇಡ್ಕರ್ ಅವರ ಹೆಸರು ನುಂಗಲಾರದ ತುತ್ತಾಗಿದೆ ಬಿಜೆಪಿಯವರಿಗೆ ಅಧಿಕಾರಕ್ಕೇರಲು ಮಾತ್ರ ಸಂವಿಧಾನ ಬೇಕು ಆದರೆ ಅವರ ಆಶಯಗಳನ್ನು ವಿರೋಧಿಸಿಕೊಂಡು ಬಂದಿದ್ದಾರೆ ಬಿಜೆಪಿ ಪಕ್ಷದ ನಾಯಕರಲ್ಲಿ ಅಂಬೇಡ್ಕರ್ ಬಗ್ಗೆ ಮೊದಲಿಂದಲೂ ತಿರಸ್ಕಾರದ ಭಾವನೆ ಇದೆ ಎಂದೂ ಆರೋಪಿಸಿದರು.