ಕೋಲಾರ – ಕೋಲಾರ ಜಿಲ್ಲೆಯನ್ನು ರೈತರ ಜಿಲ್ಲೆ ಎಂದು ಕರೆಯಲಾಗುತ್ತದೆ. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲೆಯ ಎಲ್ಲಾ ರೈತರು ಭಾಗವಹಿಸಿ ಇನ್ನು ಅನೇಕ ವಿವಿಧ ರೀತಿಯ ಕೃಷಿ ಬೆಳೆಗಳನ್ನು ಬೆಳೆದು ದೇಶಕ್ಕೆ ಮಾದರಿಯಾಗಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಇಂಚರಗೋವಿಂದರಾಜು ಅವರು ಹೇಳಿದರು.
ಪ್ರೇಯಸಿ ಸಿಟ್ಟಿಗೆ ಹಾರಿಹೋಯ್ತು ಪ್ರಿಯಕರನ ಪ್ರಾಣ! ಅಷ್ಟಕ್ಕೂ ನಡೆದಿದ್ದೇನು?
ಇಂದು ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ, ಕೋಲಾರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯುವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು ಎಂದು ತಿಳಿಸಿದರು.