ಶ್ರೀನಿವಾಸಪುರ : ಸ್ವಚ್ಛಭಾರತ್ ಮಿಷನ್ ಯೋಜನೆಯಡಿಯಲ್ಲಿ ಸರ್ಕಾರಗಳು ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿ ಪ್ರತಿ ಗ್ರಾಮ ಪಂಚಾಯತಿಗೊಂದು ಕಸ ವಿಲೇವಾರಿ ಘಟಕ ಕಸ ವಿಲೇವಾರಿ ವಾಹನ ಸಹಾ ಆಯ್ಕೆ ಮಾಡಲಾಗಿದ್ದು, ಎಲ್ಲದ್ದಕ್ಕೂ ಹಣ ಸರ್ಕಾರ ದಿಂದ ಬಿಡುಗಡೆಯಾಗುತ್ತಿದೆ ಆದರೆ ಶ್ರೀನಿವಾಸಪುರ ತಾಲ್ಲೂಕಿನ ಕೂರಿಗೇಪಲ್ಲಿ ಗ್ರಾಮ ಪಂಚಾಯತಿಗೂ ಸರ್ಕಾರ ದಿಂದ ಹಣ ಬಂದಿದ್ದು ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಿ ಹಲವು ವರ್ಷಗಳೇ ಕಳೆಯುತ್ತಿದ್ದರೂ ಬಳಕೆ ಮಾಡದೆ ಗ್ರಾಮ ಪಂಚಾಯತಿ ಅಧಿಕಾರಿಗಳು ನಿರ್ಲಕ್ಷತನ ತೋರಿದ್ದು ಕಸ ವಿಲೇವಾರಿ ಘಟಕ ಅನೈತಿಕ ಚಟುವಟಿಕೆ ತಾಣವಾಗಿ ಮಾರ್ಪಟ್ಟಿದೆ.
ಒಂದೇ ತಾಯಿ ಮಕ್ಕಳಂತೆ ಆಡಳಿತ ಮಾಡೋರು ಕಾಂಗ್ರೆಸ್ ನವರು: ಸಿದ್ದರಾಮಯ್ಯ!
ಕಸ ವಿಲೇವಾರಿ ಘಟಕದ ತುಂಬಾ ಮಧ್ಯದ ಬಾಟಲ್ ಗಳೇ ಕಾಣುತ್ತಿದ್ದು ಅಧಿಕಾರಿಗಳು ಯಾಕೆ ಇಷ್ಟೊಂದು ನಿರ್ಲಕ್ಷತನ ತೋರುತ್ತಿರುವುದು ಅಧಿಕಾರಿಗಳು ಇತ್ತ ಭೇಟಿ ನೀಡಿ ಪರಿಶೀಲನೆ ಮಾಡುವುದೇ ಇಲ್ಲವೇ ಎಂಬ ಪ್ರಶ್ನೆಯೂ ಸಹ ಕಾಡುತ್ತಿದೆ..?
ಇನ್ನು ಈ ವಿಚಾರವಾಗಿ ಕರ್ನಾಟಕ ಪ್ರಾಂತರೈತ ಸಂಘದ ಮುಖಂಡರಾದ ಪಾತಕೋಟೆ ನವೀನ್ ಕುಮಾರ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಗ್ರಾಮೀಣ ಪ್ರದೇಶದ ನೈರ್ಮಲ್ಯವನ್ನು ಕಾಪಾಡಬೇಕೆಂದು ಸ್ವಚ್ಛ ಭಾರತದ ಬಾಗವಾಗಿ ಬಂದಿರುವ ಯೋಜನೆಯಾಗಿದ್ದು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗಿದೆ
ಆದರೆ ಬಹಳಷ್ಟು ಗ್ರಾಮ ಪಂಚಾಯತಿಗಳಲ್ಲಿ ಕಸ ವಿಲೇವಾರಿ ಘಟಕಗಳನ್ನು ಬಳಕೆಮಾಡುತ್ತಿಲ್ಲಾ ಕೂರಿಗೇಪಲ್ಲಿ ಗ್ರಾಮ ಪಂಚಾಯತಿ ಕಸ ವಿಲೇವಾರಿ ಘಟಕ ಮಾತ್ರ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ್ದು ಕೂಡಲೇ ಗ್ರಾಮ ಪಂಚಾಯತಿ ಅಧಿಕಾರಿಗಳು ಇತ್ತ ಗಮನ ಹರಿಸದೇ ಹೋದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆಂದು ಎಚ್ಚರಿಕೆ ನೀಡಿದ್ದಾರೆ.