ಕೋಲಾರ:- ಇಲ್ಲಿನ ಜೆಡಿಎಸ್-ಬಿಜೆಪಿ ಎನ್.ಡಿ.ಎ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಶಕ್ತಿ ಪ್ರದರ್ಶನ ಮಾಡುವ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ರು.
ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಸಾವಿರಾರು ಸಂಖ್ಯೆಯ ಬಿಜೆಪಿ ಜೆಡಿಎಸ್ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ನಂತರ ತೆರೆದ ವಾಹನದಲ್ಲಿ ಬೃಹತ್ ಪ್ರಚಾರ ಮೆರವಣಿಗೆ ಮಾಡಿದ್ರು. ಜೆಡಿಎಸ್ ಬಿಜೆಪಿ ಎರಡು ಪಕ್ಷದ ಸಾವಿರಾರು ಕಾರ್ಯಕರ್ತರು ಬಂಗಾರಪೇಟೆ ವೃತ್ತದಿಂದ ಮೆಕ್ಕೆ ವೃತ್ತದವರೆಗೂ ಮೆರವಣಿಗೆ ಮಾಡಿದ್ರು.
ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ – ಕೆ.ಎಸ್ ಈಶ್ವರಪ್ಪ !
ಈಗಾಗಲೆ ಒಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದ್ದ ಎನ್ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಇಂದು ಹಲವು ಮುಖಂಡರು, ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ-ಜೆಡಿಎಸ್ ನಾಯಕರು ಕೋಲಾರ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಸಿದರು. ಇದೆ ವೇಳೆ ಮಾತನಾಡಿದ ಜೆಡಿಎಸ್ನ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಸದೃಢ ಭಾರತ ಕಟ್ಟಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಗಲಿರುಳು ಶ್ರಮಿಸುತ್ತಿದ್ದಾರೆ ಅಂತಹ ಪ್ರಧಾನ ಮಂತ್ರಿಯವರನ್ನು ಕೇವಲ ದೇಶ ಮಾತ್ರವಲ್ಲದೆ ವಿಶ್ವದ ಎಲ್ಲಾ ನಾಯಕರು ಗೌರವದಿಂದ ಕಾಣುತ್ತಾರೆ ಆದರೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಏಕವಚನದಲ್ಲಿ ಮಾತನಾಡುತ್ತಾರೆ, ರಾಜ್ಯದ ಖಜಾನೆಯನ್ನು ಲೂಟಿ ಹೊಡೆಯಲು ಕಾಂಗ್ರೆಸ್ ನಾಯಕರು ಶಪಥ ಮಾಡಿದ್ದಾರೆ.
ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ, ರಾಜ್ಯದ ಜನರಿಗೆ ಕುಡಿಯುವ ನೀರನ್ನು ಒದಗಿಸುವಲ್ಲಿಯೂ ರಾಜ್ಯ ಸರ್ಕಾರ ವಿಫಲವಾಗಿದೆ, ಜೆಡಿಎಸ್ ಪಕ್ಷ ಎಲ್ಲಿದೆ ಅಂತ ಲೇವಡಿ ಮಾಡುವ ಕಾಂಗ್ರೆಸ್ ಪಕ್ಷದ ಬಹುತೇಕ ನಾಯಕರು ಜೆಡಿಎಸ್ ಪಕ್ಷದಲ್ಲಿ ಜನ್ಮ ಪಡೆದು ಜೆಡಿಎಸ್ ಪಕ್ಷದಲ್ಲಿಯೇ ಬೆಳೆದು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸೇರಿಕೊಂಡಿದ್ದಾರೆ ಅಂತಹ ನಾಯಕರೆಲ್ಲಾ ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಹರಿಹಾಯ್ದರು.
ಮಾಜಿ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸ್ತಾರೆ ಆಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅದಷ್ಟಕ್ಕೇ ಅದೇ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು. ಬೃಹತ್ ಮೆರವಣಿಗೆಯಲ್ಲಿ ಸಂಸದ ಮುನಿಸ್ವಾಮಿ, ಶಾಸಕರಾದ ಜಿ.ಕೆ ವೆಂಕಟಶಿವಾರೆಡ್ಡಿ, ಸಮೃದ್ದಿ ಮಂಜುನಾಥ್, ಎಂ.ರವಿಕುಮಾರ್, ಮಾಜಿ ಶಾಸಕರಾದ ಜೆ.ಕೆ ಕೃಷ್ಣಾರೆಡ್ಡಿ, ವರ್ತೂರು ಆರ್.ಪ್ರಕಾಶ್, ಮಂಜುನಾಥಗೌಡ, ಎಂ.ನಾರಾಯಣಸ್ವಾಮಿ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್, ಜಿ.ಇ ರಾಮೇಗೌಡ ಸೇರಿದಂತೆ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು