ಕೋಲಾರ:- ತಾಲ್ಲೂಕು ಕಚೇರಿಗೆ ಕೋಲಾರ ಲೋಕಾಯುಕ್ತ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,
ಲೋಕಾಯುಕ್ತ ಎಸ್ಪಿ ಉಮೇಶ್ ಅವರ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ಬೇಟಿ ನೀಡಿ ಸುಮಾರು ಆರು ಗಂಟೆಗಳ ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಕೋಲಾರ ತಾಲ್ಲೂಕು ಕಚೇರಿಯ ಮೇಲೆ ಮೇಲಿಂದ ಮೇಲೆ ದೂರು ಗಳು ಬಂದ ಹಿನ್ನೆಲೆ, ಜೊತೆಗೆ ತಾಲ್ಲೂಕು ಕಚೇರಿಯಲ್ಲಿ ಹಣ ನೀಡದೆ ಯಾವುದೇ ಕೆಲಸಗಳು ನಡೆಯೋದಿಲ್ಲ ಅನ್ನೋ ಸಾರ್ವಜನಿಕರ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಅಧಿಕಾರಿಗಳು ಅನಗತ್ಯವಾಗಿ ಜನರ ಕೆಲಸವನ್ನು ಬಾಕಿ ಉಳಿಸಿಕೊಳ್ಳುವುದು, ಅಥವಾ ಹಣಕ್ಕಾಗಿ ಬೇಡಿಕೆ ಇಡುವ ಕುರಿತು ಪರಿಶೀಲನೆ ನಡೆಸಿದ್ರು.
![](https://ainlivenews.com/wp-content/uploads/2024/01/Ad-Banner-copy-scaled.jpg)