ಕೋಲಾರ – ಬಾಂಗ್ಲಾ ದೇಶದಲ್ಲಿ ಹಿಂದೂಗಳು ಮತ್ತು ಶ್ರದ್ಧಾ ಕೇಂದ್ರಗಳ ಮೇಲೆ ಆಗುತ್ತಿರುವ ಹಲ್ಲೆಯನ್ನು ಖಂಡಿಸಿ ಕೋಲಾರದಲ್ಲಿ ಹಿಂದೂ ರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಕೋಲಾರದ ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಆರಂಭವಾದ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ.
ಅತಿಯಾದ ಬಾಳೆಹಣ್ಣು ಸೇವನೆ ಡೇಂಜರ್! ಇದರಿಂದಾಗುವ ಅಡ್ಡಪರಿಣಾಮಗಳು ಸಾಕಷ್ಟು!?
ಜೊತೆಗೆ ಹಿಂದುಗಳ ಶ್ರದ್ದಾ ಕೇಂದ್ರಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಬಾಂಗ್ಲಾ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಡಾ. ಶಂಕರ್, ಓಂಶಕ್ತಿಚಲಪತಿ, ಸೇರಿದಂತೆ ಅನೇಕ ಹಿಂದೂ ರಕ್ಷಣಾ ಸಮಿತಿಯ ಮುಖಂಡರು ಭಾಗವಹಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.