ಕೋಲಾರ:- ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಕೇಂದ್ರ ರಕ್ಷಣಾ ಸಚಿವರನ್ನು ಕೋಲಾರ ಸಂಸದ ಮಲ್ಲೇಶ್ ಬಾಬು ಭೇಟಿ ಮಾಡಿದ್ದಾರೆ.
Health Tips: ಸಿಹಿಗೆಣಸು ಆರೋಗ್ಯದ ನಿಧಿ..! ಎಷ್ಟೆಲ್ಲಾ ಲಾಭ ಗೊತ್ತಾ..?
ಹಲವು ಬೇಡಿಕೆಗಳ ಈಡೇರಿಕೆಗಾಗಿ ಬೆಮೆಲ್ ನೌಕರರು ನಡೆಸುತ್ತಿರುವ ಪ್ರತಿಭಟನೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆ ಬೆಮೆಲ್ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ರನ್ನು ಕೋಲಾರ ಸಂಸದ ಮಲ್ಲೇಶ್ ಬಾಬು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬೆಮೆಲ್ ಕಾರ್ಮಿಕರ ಸಮಸ್ಯೆಗಳನ್ನು ಈಡೇರಿಸುವಂತೆ ಮನವಿ ಮಾಡಿರುವ ಸಂಸದರಿಗೆ ಸಚಿವರ ಕಾರ್ಯಾಲಯ ಉತ್ತಮವಾಗಿ ಸ್ಪಂದಿಸಿದ್ದು, ಆದಷ್ಟು ಬೇಗ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ.
ನವದೆಹಲಿಯ ಕೇಂದ್ರ ಕಚೇರಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಂಸದ ಮಲ್ಲೇಶ್ ಬಾಬು, ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿರುವ ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರಿಗೆ ವಿವರಿಸಿದ್ದಾರೆ. ಸತತ 22 ದಿನಗಳಿಂದ ಬೆಮೆಲ್ ಕಾರ್ಮಿಕರು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲಿಸಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.
ಸಂಸದರ ಮನವಿಯನ್ನು ಸ್ವೀಕರಿಸಿರುವ ರಕ್ಷಣಾ ಸಚಿವರು ಎಲ್ಲಾ ಅಧಿಕಾರಿ ವರ್ಗದವರೊಂದಿಗೆ ಚರ್ಚಿಸಿ ಇನ್ನು 2-3 ದಿನಗಳಲ್ಲಿ ಬೆಮೆಲ್ ಕಾರ್ಮಿಕರ ಸಮಸ್ಯೆಗಳಿಗೆ ಸಂಪೂರ್ಣ ಪರಿಹಾರ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ