ಕೋಲಾರ: ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್. ರವಿ ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಮಂಗಳ, ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2012ರ ಐ.ಎ.ಎಸ್ ಬ್ಯಾಚ್ನ ಅಧಿಕಾರಿಯಾಗಿರುವ ಡಾ.ಎಂ.ಆರ್ ರವಿಯವರು ಶೈಕ್ಷಣಿಕವಾಗಿ ಎಂ.ಎ (ಇತಿಹಾಸ) ಎಂ.ಎ (ಇಂಗ್ಲೀಷ್) ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಇತಿಹಾಸ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿರುತ್ತಾರೆ.
Toe Ring: ವಿವಾಹಿತ ಮಹಿಳೆಯರೇ ಗಮನಿಸಿ.. ಯಾವುದೇ ಕಾರಣಕ್ಕೂ ಈ ರೀತಿಯ ಕಾಲುಂಗುರ ಹಾಕಬಾರದು!
ಇಂಗ್ಲೀಷ್ ಎಂ.ಎ ಪದವಿಯಲ್ಲಿ ಚಿನ್ನದ ಪಧಕ ಪಡೆದಿರುವ ಇವರು ಮೈಸೂರಿನ ಪ್ರಮುಖ ಆಂಗ್ಲ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿ ವೃತ್ತಿ ಅನುಭವ ಹೊಂದಿರುತ್ತಾರೆ. ವಿವಿಧ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಅನೇಕ ವಿದ್ಯಾರ್ಥಿಗಳ ಜೀವನ ದೆಸೆಯನ್ನು ತಿರುಗಿಸಿದ ಅವರು ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕರಾಗಿ, ಹುಣಸೂರಿನಲ್ಲಿ ಮತ್ತು ಕಾರವಾರದಲ್ಲಿ ಸಹಾಯಕ ಆಯುಕ್ತರಾಗಿ ಕೊಡಗಿನಲ್ಲಿ ಹಿರಿಯ ಸಹಾಯಕ ಆಯುಕ್ತರಾಗಿ ವಿವಿಧ ಹುದ್ದೆಗಳಲ್ಲಿ ಕೆ.ಎ.ಎಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ.