ಕೊಪ್ಪಳ: ಬಲ್ಡೋಟಾ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಕೊಪ್ಪಳ ಬಂದ್ ಆಚರಿಸಲಾಗಿದ್ದು, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಪರಿಸರ ಸರಂಕ್ಷಣಾ ಸಮಿತಿ ಕರೆ ನೀಡಿದ್ದ ಬಂದ್ಗೆ 130 ವಿವಿಧ ಸಂಘ ಸಂಸ್ಥೆಗಳುಬೆಂಬಲ ನೀಡಿದ್ದು, ಕೊಪ್ಪಳ ಗವಿಮಠದಿಂದ ತಾಲೂಕು ಕ್ರೀಡಾಂಗಣವರಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.
ಕೊಪ್ಪಳ ನಗರ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಬಲ್ಡೋಟಾ ಸ್ಟೀಲ್ ಫ್ಯಾಕ್ಟರಿಯು ಕೊಪ್ಪಳ ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪರಿಸರದಲ್ಲಿ ಹೆಚ್ಚಿನ ಮಾಲಿನ್ಯ ಉಂಟುಮಾಡುತ್ತದೆ. ಹೀಗಾಗಿ ನಗರಕ್ಕೆ ಹೊಂದಿಕೊಂಡು ಫ್ಯಾಕ್ಟರಿ ಬೇಡ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.ಬಂದ್ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ