ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಪ್ರಶಾಂತ್ ಸಂಬರಗಿ ಡಿಕೆಶಿ ಮತ್ತು ಡಿಕೆ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡಿದ್ದರು.
ಅವರು ಕೋಮು ಭಾವಣೆ ಕೆರಳಿಸುವ ಪೋಸ್ಟ್ ಹಾಕಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ವಿರೋಧಿಸುವ ಭರದಲ್ಲಿ ಕೋಮು ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಲಕ್ಷ್ಮೀನಾರಾಯಣ್ ಎಂಬುವವರು ಸಂಬರಗಿ ವಿರುದ್ಧ ದಕ್ಷಿಣ ವಿಭಾಗ ಸೈಬರ್ ಠಾಣೆಯಲ್ಲಿ ದೂರು ನೀಡಿದ್ಧಾರೆ.ಡಿ.ಕೆ. ಶಿವಕುಮಾರ್ ಅವರು,

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯ ಮಸೂದೆಯನ್ನು ಹರಿದಿದ್ದರು. ಈ ಕುರಿತು ಸಂಬರಗಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಜೊತೆಗೆ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಪೋಟೋ ಹಾಕಿ ಅವರ ತೇಜೋವಧೆ ಮಾಡುವ ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.