ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅದರಂತೆ ಕೆಆರ್ ಪುರದ ರಾಮೂರ್ತಿನಗರದ ನಾರಾಯಣ ಪಿಯು ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ. ಬಳಿಕ ಮಾತನಾಡಿದ ಪ್ರಾಶುಂಪಾಲ ಕಿಶೋರ್ ಅವರು, ಸರ್ಕಾರದ ಆದೇಶದಂತೆ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆಯನ್ನು ವಿತರಿಸಲಾಗ್ತಿದೆ. ವಿದ್ಯಾರ್ಥಿಗಳು ಕರೋನಾ ಲಸಿಕಾ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದುಹ ಹೇಳಿದ್ದರು. ಇನ್ನೂ ಸರ್ಕಾರ ಶಾಲಾ ಮಕ್ಕಳ ಬಗ್ಗೆ ವಿಶೇಷವಾಗಿ ಗಮನಹರಿಸಿ ಉಚಿತವಾಗಿ ಕೋವಿಡ್ ಲಸಿಕೆ ನೀಡಿ ಸಹಾಯ ಮಾಡಿದೆ. ಈ ಹಿನ್ನೆಲೆ, ರಾಮಮೂರ್ತಿ ನಗರದ ನಾರಾಯಣ ಪಿಯು ಕಾಲೇಜ್ ನಲ್ಲಿ ೪೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಎಲ್ಲರಿಗೂ ಲಸಿಕೆ ವಿತರಿಸಲಾಗುತ್ತದೆ. ವಿವಿಧ ಭಾಗಗಳಲ್ಲೂ ವಿದ್ಯಾರ್ಥಿಗಳಿಗೆ ಲಸಿಕೆ ವಿತರಣಾ ಅಭಿಯಾನ ನಡೆಯುತ್ತಿದೆ ಎಂದು ಪ್ರಾಂಶುಪಾಲರು ಮಾಹಿತಿ ನೀಡಿದ್ದರು.
