ಬೆಳಗಾವಿ:-ಭ್ರಷ್ಟ ರಾಜಕಾರಣಿಗಳಿಂಗಿಂತ ವಿಭಿನ್ನ ವ್ಯಕ್ತಿತ್ವ ಹೊಂದಿದ್ದ ಕೆಆರ್ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡರು ವಿಧಿವಶರಾಗಿದ್ದಾರೆ. ಈ ನಾಡಿನ ಈ ದೇಶದ ಮಹಿಳೆಯರಿಗೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತ ಬಂದಿದ್ದಾರೆ..
ಮುಂದಿನ ದಿನಗಳಲ್ಲಿ ಈ ನಾಡು , ದೇಶ , ಗಡಿ ಮೀರಿ ಜನ ಬದುಕುತ್ತಾರೆ ಎಂದು ವಿಶ್ವ ಮಾನವತೆಯ ತತ್ವವನ್ನು ತಮ್ಮ ಮಾತುಗಳಲ್ಲಿ ಸದಾಕಾಲವೂ ನುಡಿಯುತ್ತಿದ್ದರು.
ಈ ನಾಡಿನ ಒಳಿತಿಗಾಗಿ, ತಮ್ಮ ಉತ್ತಮವಾದ ಸರ್ಕಾರಿ ನೌಕರಿ ಬಿಟ್ಟು ತಮ್ಮ ವೈಯಕ್ತಿಕವಾಗಿ ಇರುವ ಸುಖಕರ ಜೀವನದ ಅನೇಕ ಕ್ಷಣಗಳನ್ನು ತ್ಯಾಗ ಮಾಡಿ ಹೋರಾಟವನ್ನು ರೂಪಿಸಿದವರು.
ಇತ್ತೀಚಿಗಷ್ಟೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಾಗಿ ಎಸ್.ಹೆಚ್. ಲಿಂಗೇಗೌಡರು ನೇಮಕವಾಗಿದ್ದರು
ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಮಂಗಳೂರಿನಿಂದ ದೆಹಲಿಗೆ ಐದು ಜನರ ತಂಡ ಪಾದಯಾತ್ರೆ ಹೊರಟಿತ್ತು.
ಇಂದು 55ನೆಯ ದಿನ ಪಾದಯಾತ್ರೆಯು ಗುಜರಾತಿನ ಭರೂಚ್ ಎನ್ನುವ ನಗರ ತಲುಪಿತ್ತು.
ಈ ಪಾದಯಾತ್ರೆಯಲ್ಲಿದ್ದವರಿಗೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಸಹ ನೆನ್ನೆ ಮತ್ತು ಇಂದು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ಲಾರಿಯೊಂದು ರಸ್ತೆಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದು, KRS ಪಕ್ಷದ ಕಾರ್ಯಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಮತ್ತು ಮಂಗಳೂರಿನ ಕುಂಜಿ ಮೂಸಾ ಮೃತಪಟ್ಟಿದ್ದಾರೆ. ಮಹಿಳೆಯೊಬ್ಬರೂ ಸೇರಿದಂತೆ ನಾಲ್ಕು ಜನರಿಗೆ ತೀವ್ರ ಗಾಯಗಳಾಗಿವೆ. ಅವರು ಭರೂಚ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾನೂನು ಪ್ರಕ್ರಿಯೆಗಳನ್ನು ಶೀಘ್ರ ಮುಗಿಸಿ ಮೃತದೇಹಗಳನ್ನು ರಾಜ್ಯಕ್ಕೆ ವಾಪಸು ತರುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಗುಜರಾತ್ ಸರ್ಕಾರದ ಅಧಿಕಾರಿಗಳು ಮತ್ತು KRS ಪಕ್ಷದ ಮುಖಂಡರು ಸಂಪರ್ಕದಲ್ಲಿದ್ದು, ಆ ನಿಟ್ಟಿನಲ್ಲಿ ಮುಂದುವರೆದಿದ್ದಾರೆ.