ಬೆಂಗಳೂರು:- ಸಂಕ್ರಾಂತಿ ನಂತರ ಕೆಎಸ್ಆರ್ಟಿಸಿ, ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಸಾಧ್ಯತೆ ಇದ್ದು, ಹೀಗಾಗಿ ಪ್ರಯಾಣಿಕರು ಕಂಗಾಲಾಗಿದ್ದಾರೆ.
ಅರಿಶಿನ ಹಾಲು ಕುಡಿಯುತ್ತೀರಾ? ಹಾಗಿದ್ರೆ ಈ ಸುದ್ದಿ ನೀವು ತಿಳಿಯಲೇಬೇಕು!
ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆಎಸ್ಆರ್ಟಿಸಿ ಟಿಕೆಟ್ ಏರಿಕೆ ಮಾಡಿ ಐದು ವರ್ಷಗಳಾಗಿವೆ. ಹಾಗಾಗಿ ನಿಗಮಗಳನ್ನು ನಡೆಸಲು ಕಷ್ಟ ಆಗುತ್ತಿದೆ. ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದೇವೆ ಎಂದು ಮನವಿ ಮಾಡಲು ಸಾರಿಗೆ ಮುಖಂಡರು ಸಿದ್ಧವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇತ್ತ ಕಳೆದ ವಾರ ಸಿಎಂ ಜೊತೆಗೆ ಸಾರಿಗೆ ಅಧಿಕಾರಿಗಳ ಜತೆ ನಡೆದಿದ್ದ ಸಭೆಯಲ್ಲಿ, ಟಿಕೆಟ್ ದರ ಏರಿಕೆ ಮಾಡಿದರೆ ಮಾತ್ರ ಬಿಎಂಟಿಸಿ, ಕೆಎಸ್ಆರ್ಟಿಸಿ ಉಳಿಸಲು ಸಾಧ್ಯ ಎಂದು ಸಿಎಂಗೆ ಅಧಿಕಾರಿಗಳು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಯಾಗಬೇಕೆಂದು ನಾಲ್ಕೂ ನಿಗಮಗಳು ಮನವಿ ಮಾಡಿವೆ.
ಟಿಕೆಟ್ ದರದಲ್ಲಿ ಶೇ 25 ರಿಂದ 28 ರಷ್ಟು ಏರಿಕೆಗೆ ನಾಲ್ಕು ನಿಗಮಗಳು ಈ ಹಿಂದೆಯೇ ಪ್ರಸ್ತಾವನೆಯನ್ನು ಸಲ್ಲಿಸಿವೆ. ಸಂಕ್ರಾಂತಿ ಸಭೆಯ ನಂತರ ಶೇ 25 ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಾರಿಗೆ ಮುಖಂಡ ಜಗದೀಶ್ ತಿಳಿಸಿದ್ದಾರೆ.