ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್ ಚಾಲನೆಗೆ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪ್ರಧಾನಿ ಮೆಚ್ಚಿದ ʼಪೂಜಿಸಲೆಂದೆ ಹೂಗಳ ತಂದೆ..’ ಹಾಡು: ಗಾಯಕಿ ಶಿವಶ್ರೀ ಹಿನ್ನೆಲೆ ಗೊತ್ತಾ?
ಬಸವಾರಾಜು ಮೃತ ಫುಡ್ ಡೆಲಿವರಿ ಬಾಯ್. ತಡರಾತ್ರಿ 2 ಗಂಟೆ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಈ ಅಪಘಾತ ಸಂಭವಿಸಿದೆ. ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೈಸೂರು ರೋಡ್ ಕಡೆಗೆ ರಾತ್ರಿ ಫುಡ್ ಡೆಲಿವರಿ ಮಾಡಲು ಬಸವರಾಜು ತೆರಳುತ್ತಿದ್ದ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಬಸವರಾಜು ಮೃತಪಟ್ಟಿದ್ದಾನೆ.