ಚಾಮರಾಜನಗರ: ಕೆಎಸ್ಆರ್ ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ಡಿಕ್ಕಿಯಾಗಿದ್ದು ಟಾಟಾ ಏಸ್ ಚಾಲಕ ಸಿದ್ದರಾಜು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಬಳಿ ನಡೆದಿದೆ.
ಘಟನೆಯಲ್ಲಿ ಏಳು ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂಗಳ ಗ್ರಾಮದಿಂದ ಚಿಕ್ಕಲ್ಲೂರು ಜಾತ್ರೆಗೆ ತೆರಳುತ್ತಿದ್ದ ಟಾಟಾ ಏಸ್. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್.
ಮಹಿಳೆಯರು ಸೇರಿದಂತೆ ಏಳು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.