ಕಲಬುರ್ಗಿ:– ಆಟೋ ಟಚ್ ಆಗಿ ಬೈಕ್ನಿಂದ ಬಿದ್ದಿದ್ದ ಸವಾರನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಬೈಕ್ ಸವಾರ ಮೃತಪಟ್ಟ ಘಟನೆ ಕಲಬುರಗಿ ನಗರದ ಹುಮನಾಬಾದ್ ರಸ್ತೆಯಲ್ಲಿ ಜರುಗಿದೆ.
34 ವರ್ಷದ ಸೋಮಶೇಖರ್ ಮೃತ ದುರ್ದೈವಿ ಎನ್ನಲಾಗಿದೆ. ದಾಲ್ ಮೀಲ್ನಲ್ಲಿ ಕೆಲಸ ಮುಗಿಸಿ ಬೈಕ್ನಲ್ಲಿ ಹೊರಟಿದ್ದ ಸೋಮಶೇಖರ್, ಇತ್ತ ಬೀದರ್ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿದ್ದ KSRTC ಬಸ್ ನಡುವೆ ಈ ದುರಂತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.