ಬೆಳಗಾವಿ: ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraja Bommai) ಹೇಳಿದ್ದಾರೆ. ಡೀಸೆಲ್ ಇಲ್ಲದೇ ಬಸ್ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ. ಗ್ಯಾರಂಟಿಗೆ ಕಂಡಿಷನ್ ಹಾಕಿದ್ದು ಯಾಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ಇದೇ ಮೊದಲು. ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ ಈ ಬಗ್ಗೆ ಇವರಿಗೆ ಚಿಂತನೆ ಇಲ್ಲ.
Assam’s flood situation: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ: 4.88 ಲಕ್ಕೂ ಅಧಿಕ ಜನರು ತತ್ತರ
ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಸರ್ಕಾರದಲ್ಲಿದ್ದುಕೊಂಡು ಇವರು ಪ್ರತಿಭಟನೆ ಮಾಡುತ್ತಿದ್ದಾರೆ. ಅಕ್ಕಿ ಖರೀದಿಯಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತು. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನ್ ಹೇಳಿದ್ದಾರೆ ಗೊತ್ತು ಎಂದರು.
