ಬೆಂಗಳೂರು: ಕೋವಿಡ್ ಹಿನ್ನೆಲೆ ಸ್ಥಗಿತಗೊಂಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ ನೀಡಲಾಗಿದೆ.
2020ರ ಫೆಬ್ರವರಿ 2ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಕನಿಷ್ಠ 30 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳಿಗೆ ದೇಹದಾರ್ಢ್ಯ ಪರಿಶೀಲನೆ ನಡೆಯಲಿದೆ.
ಇದೇ ಡಿಸೆಂಬರ್ 26ರಿಂದ 28ರವರೆಗೆ ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ದಾಖಲಾತಿ/ದೇಹದಾರ್ಢ್ಯ ಪರಿಶೀಲನೆ ನಡೆಯಲಿದೆ.