ಬೆಂಗಳೂರು:- ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರಿಗೆ ಕ್ರಿಸ್ ಮಸ್ ಗಿಫ್ಟ್ ಕೊಟ್ಟಿದೆ. ಕ್ರಿಸ್ ಮಸ್ ಹಬ್ಬದ ಪ್ರಯುಕ್ತ 1000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ.
ಡಿ. 22 ರಿಂದ 24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ನಡೆದಿದೆ. 25 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳ ಕಾರ್ಯಾಚರಣೆ ಮಾಡಲಾಗಿದೆ.
ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರ್ಶಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ ಗಳು ಹೊರಡಲಿವೆ. ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದು. ಇ ಟಿಕೆಟ್ ಸಹ ವೆಬ್ ಸೈಟ್ ಮೂಲಕ ಪಡೆಯಬಹುದು. ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದ್ರೇ 5 % ರಿಯಾಯಿತಿ ನೀಡಲಾಗಿದೆ. ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದ್ರೇ 10% ರಿಯಾಯಿತಿ ನೀಡಲಾಗಿದೆ.