ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿ ಹೊರಡಿಸಿರುವ ಹಿನ್ನೆಲೆ, ಕೆಎಸ್ಆರ್ಟಿಸಿ ಸಂಸ್ಥೆ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಾರಂತ್ಯದ ಕರ್ಫ್ಯೂ ದಿನದಂದು ಅವಶ್ಯಕತೆಗೆ ಅನುಗುಣವಾಗಿ ಬಸ್ಗಳ ಕಾರ್ಯಚರಣೆ ಮಾಡಲಾಗುವುದು ಅಂತಾ ತಿಳಿಸಿದೆ. ಹೀಗಾಗಿ ಸಾಧ್ಯವಾದಷ್ಟು ರಾತ್ರಿ ಸಾರಿಗೆ ಸೇವೆಗಳನ್ನು ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಅಳವಡಿಸಲು ಸೂಚನೆ ನೀಡಿದೆ. ಇನ್ನು ರಾತ್ರಿ ಸಾರಿಗೆಗಳ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ಮಾತ್ರ ಬಸ್ಸುಗಳ ಕಾರ್ಯಚರಣೆ ಮಾಡಲು ನಿರ್ಧರಿಸಲಾಗಿದೆ.
