ಮಂಡ್ಯಮಾಜಿ ಮುಖ್ಯಮಂತ್ರಿ ಹೆಚ್​ ಡಿ​ ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ. ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ.  ಅವರ ರೀತಿ ಮಾತನಾಡುವುದು ಸರಿ ಅಂದರೇ ನಾನು ಅವರಪ್ಪನ ರೀತಿ ಮಾತಾಡುತ್ತೇನೆ.

Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ

ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಇರುವ ಪೆನ್ ಡ್ರೈವ್ ಬಿಡುಗಡೆ ಮಾಡಲು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಅಂತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ. ಅವರ ಹತ್ತಿರ ಇರುವುದು ಪೆನ್ ಡ್ರೈವ್ ಅಲ್ಲ ಪೆನ್ಸಿಲ್ ಡ್ರೈವ್, ಇರೋದು ಅಳಿಸಿ ಹೋಗಿದೆ ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಾಡಿದರು.

Share.