ರಾಮನಗರ:- ಕುಮಾರಸ್ವಾಮಿ ಓರ್ವ ರಣಹೇಡಿ ಎಂದು ಹೇಳುವ ಮೂಲಕ CP ಯೋಗೇಶ್ವರ್ ವ್ಯಂಗ್ಯ ಮಾಡಿದ್ದಾರೆ.
ಎಬಿಡಿ ಮಾತಿಗೆ ಬೆಲೆಕೊಟ್ಟ RCB: ಕೊನೆಗೂ ಒಂದೊಳ್ಳೆ ಆಟಗಾರನನ್ನೇ ಸೆಲೆಕ್ಟ್ ಮಾಡಿದ ಪ್ರಾಂಚೈಸಿ!
ಈ ಸಂಬಂಧ ಮಾತನಾಡಿದ ಅವರು, ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ ಎಂದು ಕುರುಕ್ಷೇತ್ರದ ಕಥೆಯಲ್ಲಿ ಬಭ್ರುವಾಹನ ಹೇಳುತ್ತಾನಲ್ಲ. ಇವತ್ತು ಕುಮಾರಸ್ವಾಮಿಯದ್ದು ಕೂಡ ಅದೇ ಪರಿಸ್ಥಿತಿ. ತನ್ನ ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದರೆ ಕೇಂದ್ರ ಸಚಿವ ಆಗಿ ಏನು ಪ್ರಯೋಜನ ಎಂದರು.
ಜೆಡಿಎಸ್ ಅವರು ಸೋತು ಸುಣ್ಣ ಆಗಿದ್ದಾರೆ. ಕುಮಾರಸ್ವಾಮಿ ಬಂಡತನ, ಅವರಿಗೆ ಇದ್ರೆ ಈ ಊರು, ಬಿಟ್ಟರೆ ಇನ್ನೊಂದು ಊರು. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನ ಸರಿಪಡಿಸಬೇಕು. ಕುಮಾರಸ್ವಾಮಿ ಏನು ಆಸಕ್ತಿ, ಕ್ರಮ ಕೈಗೊಂಡಿಲ್ಲ. ಚನ್ನಪಟ್ಟಣ ನಗರ ಸ್ವಚ್ಛ ಮಾಡುವ ಉದ್ದೇಶದಿಂದ ಎಲ್ಲಾ ನಗರಸಭಾ ಸದಸ್ಯರ ಸಭೆ ಕರೆದಿದ್ದೇನೆ. ಚನ್ನಪಟ್ಟಣ ನಗರ ಬಹಳ ದುಸ್ಥಿತಿ ಇದೆ. ಬಸ್ಸ್ಟ್ಯಾಂಡ್, ಕಸ, ಯುಜಿಡಿ ಸಮಸ್ಯೆ ಇದೆ. ಇವೆಲ್ಲವನ್ನೂ ಮೊದಲು ಬಗೆಹರಿಸಬೇಕು. ಇಂದು ಸಭೆ ನಡೆಸಿ ನಿರಂತರವಾಗಿ ತಾಲೂಕು ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದರು.