ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ವಿರೋಧಿಸಿ ಪಕ್ಷದಿಂದ ಹೊರಬಂದ ಒಕ್ಕಲಿಗ ನಾಯಕರನ್ನು ಚುನಾವಣೆಯಲ್ಲಿ ಸೋಲಿಸುತ್ತಾ ಬಂದವರು, ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಸುಖಾಸುಮ್ಮನೆ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಅವರು ಈ ಕೆಲಸ ಮುಂದುವರಿಸಿದರೆ ನಾನೂ ನನ್ನ ವರಸೆ ತೋರಿಸಬೇಕಾಗುತ್ತದೆ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ.ರೇವಣ್ಣಗೆ ಎಚ್ಚರಿಕೆ ನೀಡಿದರು.
”ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ನನ್ನ ಹೆಸರು ಹೇಳುವುದಿಲ್ಲ, ಒಮ್ಮೆ ಅರಸೀಕೆರೆಯವನು ಅಂತಾರೆ, ನಾನೂ ಅವರನ್ನು ಚನ್ನಪಟ್ಟಣ ಶಾಸಕ ಅನ್ನಬಹುದು, ಆದರೆ ನಾನು ಹಾಗೆ ಮಾತನಾಡುವುದಿಲ್ಲ,”ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ”ನನಗೂ ನಮ್ಮಪ್ಪ ಹೆಸರು ಕಟ್ಟಿದ್ದಾನೆ, ನಾನು ಬಡ ರೈತನ ಮಗ. ನನ್ನ ಹೆಸರು ಹೇಳೋಕೆ ನಾಚಿಕೆಯಾದರೆ ಹೇಳಬೇಡಿ ಎಂದು ವಿಧಾನಸಭೆಯಲ್ಲೇ ಹೇಳಿದ್ದೆ. ಆದರೂ ಅದೇ ಪರಿಪಾಟ ಇನ್ನೂ ಮುಂದುವರಿಸಿದ್ದಾರೆ.
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ʼನಲ್ಲಿದೆ ಉದ್ಯೋಗಾವಕಾಶ..! ಬೆಂಗಳೂರಿನಲ್ಲಿಯೇ ಪೋಸ್ಟಿಂಗ್
ಮಜ್ಜಿಗೆ ಮಾರುವವನು ಎಂದು ಹೊಸದಾಗಿ ಟೀಕಿಸಲು ಪ್ರಾರಂಭಿಸಿದ್ದಾರೆ. ಮಜ್ಜಿಗೆ ಏನು ಸ್ಮಗ್ಲಿಂಗ್ ಗೂಡ್ಸೇ,” ಎಂದು ಪ್ರಶ್ನಿಸಿದರು. ”ವಿದ್ಯಾರ್ಥಿಯಾಗಿ ಗಂಡಸಿ ಶಾಲೆಗೆ ಸೈಕಲ್ನಲ್ಲಿ ಬರುತ್ತಿದ್ದಾಗ ಹಾಲು-ಮೊಸರನ್ನು ಕ್ಯಾನ್ನಲ್ಲಿ ತುಂಬಿ ಕಳುಹಿಸುತ್ತಿದ್ದರು. ಅದನ್ನು ತಂದು ಗಂಡಸಿ ಹೋಟೆಲ್ಗೆ ಕೊಡುತ್ತಿದೆ, ಇದು ತಪ್ಪೇ? ನಾನು ಮಜ್ಜಿಗೆ, ಮೊಸರು ಮಾರುವವನು ಎಂದು ವ್ಯಂಗ್ಯವಾಡುವುದಾದರೆ ಎಚ್.ಡಿ.ಕುಮಾರಸ್ವಾಮಿ ಹಿಂದೆ ಬಿಬಿಎಂಪಿ ಕಸದ ಟೆಂಡರ್ ಪಡೆದಿದ್ದರಲ್ಲ, ಅದಕ್ಕೆ ಏನನ್ನಬೇಕು,” ಎಂದು ವ್ಯಂಗ್ಯವಾಡಿದರು.