ರಾಮನಗರ: ಕಣ್ಣೀರು ಹಾಕಲು ನನಗೆ ಬರಲ್ಲ. ನಾನು ಕಣ್ಣಿರು ಹಾಕಲ್ಲ. ನನಗೆ ನಾಟಕ ಮಾಡಲು ಬರಲ್ಲ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರೋಕ್ಷವಾಗಿ ಹೆಚ್ಡಿಕೆಗೆ ಟಾಂಗ್ ಕೊಟ್ಟಿದ್ದಾರೆ. ಸಭೆ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನಲ್ಲಿ ಇದು ನನ್ನ 10ನೇ ಚುನಾವಣೆ. ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ.
ಕುಮಾರಸ್ವಾಮಿ ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಿಡಿಕಾರಿದರು. ನಾನು, ಸುರೇಶ್ ಸೇರಿ ಒಂದು ಹೊಸ ಯೋಜನೆ ಬಗ್ಗೆ ಆಲೋಚನೆ ಮಾಡಿದ್ದೇವೆ. ಕೆಆರ್ಎಸ್ನಿಂದ ಮಾರ್ಕೋನಹಳ್ಳಿ ಡ್ಯಾಂಗೆ ನೀರು ತಂದು ಅದನ್ನು ಕಣ್ವ, ಇಗ್ಗಲೂರು ಡ್ಯಾಂಗೆ ತರಬಹುದು. ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ.
ಆಧಾರ್ ಕಾರ್ಡ್ʼನಲ್ಲಿ ಹೆಸರು, ವಿಳಾಸವನ್ನು ಎಷ್ಟು ಬಾರಿ ತಿದ್ದುಪಡಿ ಮಾಡಬಹುದು ಗೊತ್ತಾ..? ಇಲ್ಲಿದೆ ಮಾಹಿತಿ
ಶಿವಲಿಂಗೇಗೌಡರಿಗೆ ಅವರ ಎಲ್ಲಾ ಮರ್ಮಗಳು ಗೊತ್ತು. ಅವರ ಪ್ಲಾನ್ಗಳು ನಮ್ಮ ಬಹುತೇಕ ನಾಯಕರಿಗೆ ಗೊತ್ತು. ನನ್ನ ಮೇಲೆ ಅವರ ಮನೆಯವರು ಯಾಕೆ ಹೀಗೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ. ನಾನೇನು ತಪ್ಪು ಮಾಡಿದ್ದೀನಿ? ನನ್ನ ಮೇಲೆ ಯಾಕೆ ಹೀಗೆ ಬೀಳ್ತಾರೆ? ಕುಮಾರಸ್ವಾಮಿ ಬಂದ್ರು, ಅವರ ಪತ್ನಿ ಬಂದ್ರು ಈಗ ಮಗ ಬಂದ್ರು ಎಂದು ವಾಗ್ದಾಳಿ ನಡೆಸಿದರು.