ಬೆಂಗಳೂರು: ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರು ಭೇಟಿ ನೀಡುವುದು ಸುದ್ದಿಯಾಗದಂತೆ ತಡೆಯಲು ಯತ್ನಿಸಿರುವುದು ಸಿದ್ದರಾಮಯ್ಯ ಅವರ ಅಂಜು ಬುರುಕುತನ ತೋರಿಸುತ್ತದೆ. ಎಂದು ಜೆಡಿಎಸ್ ಘಟಕದಿಂದ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.
https://x.com/JanataDal_S/status/1814572954656907382?s=19
ರಕ್ಷಣಾ ಕಾರ್ಯಾಚರಣೆ ಸ್ಥಳದಿಂದ ೫ ಕಿ.ಮೀ ದೂರದಲ್ಲೇ ಬ್ಯಾರಿಕೇಡ್ ಹಾಕಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ. ಮಾಧ್ಯಮಗಳ ಸ್ವತಂತ್ರ್ಯ ಹತ್ತಿಕ್ಕುವ ನಿಮ್ಮ ಈ ನಡೆ ಸಂವಿಧಾನ ವಿರೋಧಿ ಅಲ್ಲವೇ ಮುಖ್ಯಮಂತ್ರಿಗಳೇ..?
ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ
ದುರಂತ ನಡೆದು ಇಷ್ಟು ದಿನಗಳಾದರೂ ಶಿರೂರಿಗೆ ನೀವಾಗಲಿ, ನಿಮ್ಮ ಸರ್ಕಾರದ ಯಾವುದೇ ಸಚಿವರಾಗಲಿ, ಸ್ಥಳಕ್ಕೆ ಭೇಟಿ ನೀಡಿಲ್ಲ. ಸಂತ್ರಸ್ಥರ ಸಂಕಷ್ಟ ಆಲಿಸಿಲ್ಲ. ಆದರೆ ಮಾನ್ಯ ಕುಮಾರಸ್ವಾಮಿ ಅವರು ಶಿರೂರು ಗ್ರಾಮಕ್ಕೆ ಭೇಟಿ ನೀಡುವ ವೇಳೆಯೂ ನಿಮ್ಮ ಸರ್ಕಾರದ ಈ ಸೇಡಿನ ರಾಜಕೀಯ ಥರವೇ..?
ಅದೇನೇ ಇರಲಿ, ಕುಮಾರಸ್ವಾಮಿ ಅವರಂತೂ ಪ್ರಚಾರಕ್ಕೆನೂ ಶಿರೂರಿಗೆ ಭೇಟಿ ನೀಡುತ್ತಿಲ್ಲ, ಜಿಲ್ಲಾಡಳಿತವನ್ನು ಬಳಸಿ ಮಾಧ್ಯಮದವರನ್ನು ತಡೆದ ಮಾತ್ರಕ್ಕೆ, ಕುಮಾರಸ್ವಾಮಿ ಅವರ ಭೇಟಿ ನಿಲ್ಲಿಸಲು ಸಾಧ್ಯವೇ? ಸಂತ್ರಸ್ಥರ ಕಷ್ಟ ಆಲಿಸುವುದನ್ನು ತಡೆಯಲು ಸಾಧ್ಯವೇ?